ಜಿಲ್ಲೆ

ಕಾಂಗ್ರೆಸ್ ಮುಖಂಡರಿಂದ ಖಾದಿ ರಾಷ್ಟ್ರಧ್ವಜಗಳ ಖರೀದಿ

ಹುಬ್ಬಳ್ಳಿ: ಇಲ್ಲಿನ ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಸಂಘದಿಂದ ಸೋಮವಾರದಂದು ಮಹಾನಗರ ಜಿಲ್ಲಾ ಕಾಂಗ್ರೆಸ್ ಮುಖಂಡರು ಖಾದಿಯಿಂದ ಸಿದ್ಧಪಡಿಸಿದ ರಾಷ್ಟ್ರಧ್ವಜಗಳನ್ನು ತಯಾರಿಸಿದರು. ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಅಲ್ತಾಫ ಹಳ್ಳೂರ, ಹೂವಪ್ಪ ದಾಯಗೋಡಿ ಹಾಗೂ ಇತರ ಕಾಂಗ್ರೆಸ್ ಮುಖಂಡರು ಇದ್ದರು. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ೭.೧೧ ಲಕ್ಷ ರೂ. ಮೌಲ್ಯದ, ಜಮಖಂಡಿ ಶಾಸಕ ಆನಂದ ನ್ಯಾಮಗೌಡರ ೭೫ ಸಾವಿರ ರೂ. ಮೌಲ್ಯದ ರಾಷ್ಟ್ರಧ್ವಜ ಖರೀದಿಸಿದ್ದಾರೆ. ಬೆಂಗೇರಿಯ ಖಾದಿ ಗ್ರಾಮೋದ್ಯೋಗಕ್ಕೆ ಇತ್ತೀಚೆಗೆ ಭೇಟಿ ನೀಡಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಉಮಾಶ್ರೀ ಹಾಗೂ ಇತರರು, ಖಾದಿಯಿಂದ ಸಿದ್ಧಪಡಿಸಿರುವ ರಾಷ್ಟ್ರಧ್ವಜಗಳನ್ನು ಮಾತ್ರ ಬಳಕೆ ಮಾಡುವಂತೆ ಜನರಿಗೆ ಮನವಿ ಮಾಡಿದ್ದರು.