ಶಿರಾಳಕೊಪ್ಪದಲ್ಲಿ ನೂತನ ಇಂದಿರಾ ಕ್ಯಾಂಟೀನ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಮಮತಾ ನಿಂಗಪ್ಪ, ಮುದಾಸಿರ್, ಮಹಾಬಲ, ನಾಗರಾಜ ಗೌಡ ಇತರರಿದ್ದರು. 
ಜಿಲ್ಲೆ

ಕಾಂಗ್ರೆಸ್ ಸರ್ಕಾರದಿಂದ ಜನರ ಕಲ್ಯಾಣ

ಶಿರಾಳಕೊಪ್ಪ: ಈಗಾಗಲೇ ಸೊರಬ ಆನವಟ್ಟಿ, ಶಿರಾಳಕೊಪ್ಪ ಪಟ್ಟಣಗಳಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದ್ದು, ಮುಂದಿನ ದಿನಗಳಲ್ಲಿ ಶಿಕಾರಿಪುರ ಪಟ್ಟಣದಲ್ಲಿಯೂ ಉದ್ಘಾಟನೆ ಮಾಡಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ಪಟ್ಟಣದಲ್ಲಿ ಭಾನುವಾರ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿದ ಅವರು, ವಿಪಕ್ಷದವರು ಇಷ್ಟು ದಿನ ನಾವು ಕಲ್ಯಾಣ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುತ್ತಾರೆ. ಆದರೆ ನಾವು ಮಾಡಿ ತೋರಿಸಿದ್ದೇವೆ ಎಂದರು. ಸಾರ್ವಜನಿಕರಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದು ಕಾಂಗ್ರೆಸ್ ಸರ್ಕಾರ. ಅದರ ಪಾಲುದಾರರು ಮಾತ್ರ ನಾವಾಗಿದ್ದೇವೆ. ಇಲ್ಲಿ ಮಂಜೂರಾದ ಇಂದಿರಾ ಕ್ಯಾಂಟೀನ್ ಸ್ವಾರ್ಥಕ್ಕೋಸ್ಕರ ಬೇರೆ ಕಡೆ ಸೂಚಿಸಿದ್ದರು. ಆದರೆ ಇಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕರ ಆಗ್ರಹದ ಮೇರೆಗೆ ಈ ದಿನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆಯಾಗಿದೆ. ಇದರಿಂದ ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ ಎಂದರು. ಶಾಲೆಗಳು ಶೀಘ್ರದಲ್ಲಿ ಆರಂಭವಾಗಲಿದೆ. ಅತಿಥಿ ಶಿಕ್ಷಕರನ್ನು ಶೀಘ್ರ ನೇಮಕ ಮಾಡಿಕೊಳ್ಳುತ್ತೇವೆ. ಸರ್ಕಾರಿ ಶಾಲೆಗಳಲ್ಲಿ ಉಚಿತವಾಗಿ ಎಲ್ಲವನ್ನೂ ನೀಡಲಿದ್ದೇವೆ. ಎಲ್ಲ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ, ಗುಣಮಟ್ಟದ ಶಿಕ್ಷಣವನ್ನು ಕೊಡುವುದೇ ನಮ್ಮ ಮುಖ್ಯ ಉದ್ದೇಶ ಎಂದರು. ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ, ಉಪಾಧ್ಯಕ್ಷ ಮುದಾಸಿರ್, ಸ್ಥಾಯಿ ಸಮಿತಿ ಅಧ್ಯಕ್ಷ ಮಹಾಬಲ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಗೌಡ, ಮುಖ್ಯಾಧಿಕಾರಿ ಹೇಮಂತ್, ಯೋಜನಾ ನಿರ್ದೇಶಕ ರಂಗಸ್ವಾಮಿ, ಅಭಿಯಂತರಾದ ಶೇಖರ್, ಸುಶ್ಮಿತಾ, ವ್ಯವಸ್ಥಾಪಕ ನಿರಂಜನ್ ಇತರರಿದ್ದರು.

ರೈಟ್ ಫುಡ್ ಆ್ಯಕ್ಟ್ ತಂದಿರುವುದು ಕಾಂಗ್ರೆಸ್ ಸರ್ಕಾರ. ಆದರೆ ಬಿಜೆಪಿಯವರು ಸೋಶಿಯಲ್ ಮೀಡಿಯಾ ಆ್ಯಕ್ಟ್ ತಂದು ಸುಳ್ಳು ವಿಷಯವನ್ನು ಹೇಳಿ ದೇಶ ಹಾಳು ಮಾಡುತ್ತಿದ್ದಾರೆ. ಸುಳ್ಳು ಮಾಹಿತಿ ನೀಡುವುದನ್ನು ನಿಲ್ಲಿಸಬೇಕು. ಸಮಾಜದಲ್ಲಿ ಎಲ್ಲರೂ ಪ್ರೀತಿ, ವಿಶ್ವಾಸದಿಂದ ವಾಸಿಸುವ ಪರಿಕಲ್ಪನೆ ನಿರ್ಮಾಣವಾಗಬೇಕು. ಮಧು ಬಂಗಾರಪ್ಪ, ಸಚಿವ