ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವುದು ಅತ್ಯಂತ ದುಃಖ ತಂದಿದೆ. ಈ ಅಮಾಯಕರ ಸಾವಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಕಾರ್ಯದರ್ಶಿ ನವೀನಕುಮಾರ ಎಂ. ಆರೋಪಿಸಿದ್ದಾರೆ.
ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದೇ ಈ ದುರಂತಕ್ಕೆ ಕಾರಣ. ಸೂಕ್ತ ಭದ್ರತೆ ಕೈಗೊಳ್ಳುವಲ್ಲಿ ಸರ್ಕಾರ ವಿಫಲವಾಗಿರುವುದು ಎದ್ದು ಕಾಣುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕ್ರೆಡಿಟ್ ತೆಗೆದುಕೊಳ್ಳುವ ಹಪಾಹಪಿಗೆ ಅಮಾಯಕರು ಪ್ರಾಣ ಕಳೆದುಕೊಳ್ಳುವಂತೆ ಆಗಿರುವುದು ದುರದೃಷ್ಟಕರ. ಈ ಘಟನೆಯ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಗೃಹ ಸಚಿವ ಡಾ. ಜಿ. ಪರಮೇಶ್ವರ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.