ಹುಬ್ಬಳ್ಳಿ : ಸ್ಯಾಂಟ್ರೋ ರವಿ ಬಿಜೆಪಿ ಕಾರ್ಯಕರ್ತರ ಹೌದೊ ಅಥವಾ ಅಲ್ಲೋ ಎಂಬುದನ್ನು ಪರಿಶೀಲಿಸಲು ಹೇಳಿರುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮಾತ್ರ ಇಂತಹ ತಲೆಹಿಡುಕರು ಇರೋಕೆ ಸಾಧ್ಯ ಎಂಬ ಕಾಂಗ್ರೆಸ್ ಟ್ವಿಟ್ಗೆ ಪ್ರತಿಕ್ರಿಯೆ ನೀಡಿದರು.
ಇಂತಹ ಸಂಸ್ಕೃತಿ ಆರಂಭವಾಗಿದ್ದೇ ಕಾಂಗ್ರೆಸ್ನಿಂದ. ಆ ಪಕ್ಷದಲ್ಲಿ ಎಂತವರು ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಕಾಂಗ್ರೆಸ್ ರಾಜಕೀಯ ದಿವಾಳಿತನಕ್ಕೆ ತಲುಪಿದೆ ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಉಚಿತ ಯೋಜನೆಗಳ ಬಗ್ಗೆ ಸುಳ್ಳು ಆಶ್ವಾಸನೆಗಳನ್ನು ನೀಡುತ್ತ, ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.