ಬಿಜೆಪಿ ಕಾರ್ಯಕರ್ತರು ಸವದತ್ತಿ ಉಪತಹಸೀಲ್ದಾರ್ ಎಂ.ಎನ್. ಗುಂಡಪ್ಪಗೋಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮುಖಂಡರಾದ ವಿರೂಪಾಕ್ಷ ಮಾಮನಿ, ಜಗದೀಶ ಶಿಂತ್ರಿ, , ಈರಣ್ಣ ಚಂದರಗಿ, ನಯನಾ ಇತರರು ಇದ್ದರು. 
ಜಿಲ್ಲೆ

ಕಾಂಗ್ರೆಸ್‌ನಿಂದ ಅಭಿವೃದ್ಧಿ ಅಸಾಧ್ಯ

ಸವದತ್ತಿ: ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಹಾಗೂ ಗ್ಯಾರಂಟಿ ಯೋಜನೆಗಳು ವೈಲ್ಯ ಖಂಡಿವೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ಜೋಡೆತ್ತು ಮೆರವಣಿಗೆ ಮೂಲಕ ಪ್ರತಿಭಟಿಸಿದರು.

ಬಳಿಕ ಉಪತಹಸೀಲ್ದಾರ್ ಎಂ. ಎನ್. ಗುಂಡಪ್ಪಗೋಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಿಜೆಪಿ ಮುಖಂಡ ವಿರೂಪಾಕ್ಷ ಮಾಮನಿ ಮಾತನಾಡಿ, ಉಚಿತ ಯೋಜನೆಗಳ ಜಾರಿ ಉದ್ದೇಶಕ್ಕೆ ಕಾಂಗ್ರೆಸ್ ಸರ್ಕಾರ ಹತ್ತು ಜನಪರ ಯೋಜನೆ ಕೈ ಬಿಡುತ್ತಿದೆ. ಬಡವರು, ಹಿಂದುಳಿದವರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ಸೌಲಭ್ಯ ಕಸಿದುಕೊಂಡಿದೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವದ್ಧಿ ಅಸಾಧ್ಯ. ಎಲ್ಲರೂ ಒಟ್ಟಾಗಿ ಪಕ್ಷ ಸಂಘಟಿಸಿ ಜನರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಹೋರಾಡೋಣ ಎಂದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ಎಲ್ಲ ಜನರಿಗೂ ಗ್ಯಾರಂಟಿ ಸವಲತ್ತು ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಸಮರ್ಪಕವಾಗಿ ಯೋಜನೆ ಜಾರಿ ಮಾಡದೆ ವೈಲ್ಯ ಕಂಡಿದೆ ಎಂದು ಕಿಡಿಕಾರಿದರು. ಸೆ.8ರಂದು ಬೆಳಗಾವಿಯಲ್ಲಿ ಬಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತೇವೆ ಎಂದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಜಗದೀಶ ಶಿಂತ್ರಿ, ಜಗದೀಶ ಕೌಜಗೇರಿ, ತಾಲೂಕು ಮಂಡಲ ಅಧ್ಯಕ್ಷ ಈರಣ್ಣ ಚಂದರಗಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನಯನಾ ಭಸ್ಮೆ, ವೆಂಕಟೇಶ ದೇವರೆಡ್ಡಿ, ಸುನೀಲ ಮಾಮನಿ, ಜಗದೀಶ ಹನಸಿ, ರಾಜು ಸಾಲಿಮಠ ಇದ್ದರು.