ಜಿಲ್ಲೆ

ಕಾಂಗ್ರೆಸ್‌ನಿಂದ ಹಿಂದುಳಿದವರ ಹಿತರಕ್ಷಣೆ

ಕಲಬುರಗಿ: ಕಾಂಗ್ರೆಸ್ ಸರ್ಕಾರ ಹಿಂದುಳಿದವರ ಹಿತರಕ್ಷಣೆ ಮಾಡುತ್ತಿದ್ದು, ಸಾಮಾಜಿಕ ನ್ಯಾಯ ನೀಡಿ ಸರ್ವರ ಅಭಿವೃದ್ಧಿಗೆ ಕೆಲಸ ನಿರ್ವಹಿಸುತ್ತಿದೆ. ಆದ್ದರಿಂದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರನ್ನು ಬೆಂಬಲಿಸಲು ನಿರ್ಧರಿಸಲಾಗಿದೆ ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ ಕೌಲಗಿ ತಿಳಿಸಿದರು. ಹಿಂದುಳಿದ ವರ್ಗದ ಸಿದ್ದರಾಮಯ್ಯ ಸಿಎಂ, ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷ, ಕಕ ೩೭೧ (ಜೆ) ಜಾರಿ, ಐದು ಸಾವಿರ ಅನುದಾನದ ಭರವಸೆ, ಜಿಲ್ಲೆಯಲ್ಲಿ ಹೈಕೋರ್ಟ್, ಕೇಂದ್ರೀಯ ವಿವಿ, ಪೊಲೀಸ್ ತರಬೇತಿ ಕೇಂದ್ರ, ಇಎಸ್‌ಐ ಆಸ್ಪತ್ರೆ, ತಾಯಿ ಮಕ್ಕಳ, ಜಯದೇವ ಆಸ್ಪತ್ರೆ, ರಸ್ತೆಗಳ ನಿರ್ಮಾಣ ಸೇರಿ ಹಲವು ಅಭಿವೃದ್ಧಿ ಕಾರ್ಯ ಮಾಡಿದ್ದರಿಂದ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು. ಕಾಂಗ್ರೆಸ್ ಐದು ಗ್ಯಾರಂಟಿಗಳ ಮೂಲಕ ಬಡವರ ಪ್ರಗತಿಗೆ ಶ್ರಮಿಸುತ್ತಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ ನ್ಯಾಯ, ಹಿಸ್ಸೇದಾರಿ ನ್ಯಾಯ ಸೇರಿ ಪ್ರಮುಖ ಜನಪರ ಭರವಸೆಗಳನ್ನು ನೀಡಿದೆ. ಜನಪರ ನಿಲುವಿನಿಂದ ಕಾಂಗ್ರೆಸ್‌ಗೆ ಅಧಿಕಾರ ನೀಡಲಾಗುವುದು ಎಂದು ಹೇಳಿದರು. ಪಿಡ್ಡಪ್ಪ ಜಾಲಗಾರ ಇತರರಿದ್ದರು.