filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.46753937, 0.59032154);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 33; 
ಜಿಲ್ಲೆ

ಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಿ

ಚಿತ್ರದುರ್ಗ: ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ನ್ಯಾಯಕ್ಕಾಗಿ ಕಾಂತರಾಜ್ ಆಯೋಗದ ವರದಿಯನ್ನು ತ್ವರಿತವಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ರಾಜ್ಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಸೈದಪ್ಪ ಕೆ.ಗುತ್ತೇದಾರ್ ಒತ್ತಾಯಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಹಿಂದುಳಿದ ವರ್ಗಗಳ 197 ಜಾತಿಗಳ ಮಹಿಳಾ ಸಂಘಗಳಿಗೆ ಬಡ್ಡಿ ರಹಿತ ಸಾಲ ನೀಡಬೇಕು ಎಂದು ಆಗ್ರಹಿಸಿದರು.

ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 10 ಸಾವಿರ ಕೋಟಿ ರೂ. ಅನುದಾನವನ್ನು ಸರ್ಕಾರ ಬಜೆಟ್‌ನಲ್ಲಿ ಮೀಸಲಿಡಬೇಕು. ಚುನಾವಣೆ ವೇಳೆ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳು ಅತೀ ಹಿಂದುಳಿದ ವರ್ಗದವರಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾದರಿಯಲ್ಲೇ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಡಿ.ದೇವರಾಜ್ ಅರಸು ಸಮುದಾಯ ಭವನ ಸ್ಥಾಪಿಸಬೇಕು. ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಬೆಂಗಳೂರಿನಲ್ಲಿ ಆಗಸ್ಟ್ 31ರಂದು ರಾಜ್ಯಮಟ್ಟದ ಹಿಂದುಳಿದ ವರ್ಗಗಳ ಮಹಿಳಾ ಸಮಾವೇಶ ಹಾಗೂ ಡಿ.ದೇವರಾಜ ಅರಸು ಅವರ ಜಯಂತಿ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ವಿವಿಧ ರಂಗಗಳಲ್ಲಿ ಸಾಧನೆಗೈದ ಸಾಧಕರಿಗೆ, ಹಿಂದುಳಿದ ವರ್ಗಗಳ ರತ್ನ ಡಿ.ದೇವರಾಜ ಅರಸು 2024ರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ವೇಳೆ ರಾಜ್ಯ ಸರ್ಕಾರದ ಮುಂದೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಿದ್ದೇವೆ ಎಂದರು.

ತಿನಾ ಶ್ರೀನಿವಾಸ್, ದೀಪಾ ನಾಯ್ಕ್, ಸುಜಾತಾ ಕುಂಬಾರ್, ನವೀನ್ ಚಂದ್ರ ಪೂಜಾರಿ, ದೇವರತ್ನ ಮಂಜು, ಆರ್.ಮೋಹನ್ ಸಾದುಶೆಟ್ಟಿ, ಆರ್.ಟಿ.ನಟರಾಜ್ ವಿಶ್ವಕರ್ಮ, ಪ್ರತಾಪ್‌ಜೋಗಿ ಇತರರಿದ್ದರು.