ಸೋಮವಾರಪೇಟೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ನಿಂದ ಐಗೂರು ಕಾರ್ಯಕ್ಷೇತ್ರದ ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಮಂಗಳವಾರ ಆಯೋಜಿಸಲಾಗಿತ್ತು.
ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಅವರು ಶಾಲಾ ಆವರಣದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಮಗುಗೊಂದು ಸಸಿ ನೆಡು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ ಸರಳಕುಮಾರಿ, ಒಕ್ಕೂಟದ ಅಧ್ಯಕ್ಷ ಗೋಪಾಲ್ ಕೃಷ್ಣ, ಐಗೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶೋಭಾ, ಆಶಾ ಕಾರ್ಯಕರ್ತರಾದ ಜಾನಕಿ, ಅಮುದ, ವಲಯದ ಮೇಲ್ವಿಚಾರಕರಾದ ಲಕ್ಷ್ಮಣ್, ಕೃಷಿ ಮೇಲ್ವಿಚಾರಕರಾದ ರಾಜಣ್ಣ ಸೇವಾ ಪ್ರತಿನಿಧಿ ಚೆನ್ನಮ್ಮ ಇದ್ದರು.