ನಾಪೋಕ್ಲು: ಸಮೀಪದ ಕುಂಜಿಲ ಗ್ರಾಮದ ವಾಟೆಕಾಡು ಕಾಲನಿಯಲ್ಲಿ ಕಾಡಾನೆಗಳು ದಾಂಧಲೆ ನಡೆಸಿರುವುದರಿಂದ ರಸ್ತೆ ಹಾಗೂ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕಕ್ಕಬೆ ಗ್ರಾಮ ಪಂಚಾಯಿತಿಯ ಕುಂಜಿಲ ಗ್ರಾಮದ ವಾಟೆಕಾಡು ಕಾಲನಿಯಲ್ಲಿ ಶುಕ್ರವಾರ ರಾತ್ರಿ ಕಾಡಾನೆ ಸತೀಶ್ ಎಂಬುವರ ತೋಟದಲ್ಲಿ ಕೃಷಿ ಗಿಡಗಳನ್ನು ಧ್ವಂಸ ಮಾಡಿದ್ದಲ್ಲದೆ, ಬೈನೆ ಮರವನ್ನು ಬೀಳಿಸಿದ್ದರಿಂದ ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಕಂಬ ಹಾಗೂ ಬೈನೆಮರ ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದಾಗಿ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ಮಾತ್ರವಲ್ಲ ವಿದ್ಯುತ್ ಸಂಪರ್ಕ ಸ್ಥಗಿತಗೊಂಡು ಕೆತ್ತೆ ಕೊಚ್ಚಿ, ವಾಟೆಕಾಡು ವ್ಯಾಪ್ತಿಯಲ್ಲಿ ಕಗ್ಗತ್ತಲು ಆವರಿಸಿದೆ.