ಬೇಲೂರು: ತಾಲೂಕಿನಲ್ಲಿ ಅರೇಹಳ್ಳಿ ಹೋಬಳಿಯ ನಂದಗೋಡನಹಳ್ಳಿ ಗ್ರಾಮದ ಮಂಜುನಾಥ್‌ಎಂಬುವರು ಶುಕ್ರವಾರ ಕಾಡಾನೆ ದಾಳಿಗೆ ಗಂಭೀರವಾಗಿ ಗಾಯಗೊಂಡು ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮಂಜುನಾಥ್ ಅವರು ಗ್ರಾಮದ ಸಮೀಪದ ಕಾಫಿ ತೋಟದಲ್ಲಿ ಬೆಳಗ್ಗೆ ಕೆಲಸ ಮಾಡುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಕಾಡಾನೆ ಮಂಜುನಾಥ್‌ಅವರ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದೆ.
ಕಾಡಾನೆ ದಾಳಿಯಿಂದ ಮಂಜುನಾಥ್ ಅವರ ಸೊಂಟ, ಕೈ ಕಾಲು ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಆಗಮಿಸಿ ಪರಿಶೀಲನಡಿಸಿದ್ದಾರೆ.