ಜಿಲ್ಲೆ

ಕಾಡಾನೆಗಳ ದಾಳಿಗೆ ಭತ್ತದ ಫಸಲು ನಷ್ಟ

ವಿರಾಜಪೇಟೆ: ವಿರಾಜಪೇಟೆಯ ಪುದುಕೊಟೆಯಲ್ಲಿ ಸೋಮವಾರ ಕಾಡಾನೆಗಳ ದಾಳಿಗೆ ಅಪಾರ ಪ್ರಮಾಣದ ಭತ್ತದ ಬೆಳೆ ನಷ್ಟವಾಗಿದೆ.

ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುದುಕೊಟೆಯ ಗ್ರಾಮದ ಮಂಡೆಪಂಡ ಜಾಲಿ ಅವರ ಗದ್ದೆಗಳಲ್ಲಿ ಕಾಡಾನೆಗಳು ದಾಳಿ ನಡೆಸಿದ್ದು ಕೈಸೇರಬೇಕಿದ್ದ ಅಪಾರ ಪ್ರಮಾಣದ ಭತ್ತದ ಬೆಳೆ ಹಾನಿಯಾಗಿದೆ. ಈ ಭಾಗದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳಿಂದ ತೊಂದರೆಯಾಗುತ್ತಿದೆ. ಅಲ್ಲದೆ ಕೆ.ಕುಮಾರ್ ಮತ್ತು ಪೊಕರ್ಂಡ ನಾಚಪ್ಪ ಅವರ ಗದ್ದೆಗಳಲ್ಲೂ ಕಾಡಾನೆಗಳು ದಾಳಿ ನಡೆಸಿದ್ದು ಬೆಳೆ ಹಾನಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.