ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕ ಪ್ರೊ.ಸಿ. ಬಸವರಾಜು ಅವರು ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಯಾಗಿ ನಿಯೋಜನೆಗೊಂಡಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಶುಕ್ರವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಇವರ ಅಧಿಕಾರದ ಅವಧಿ 4 ವರ್ಷ ಅಥವಾ 67 ವರ್ಷ ವಯಸ್ಸಿನವರೆಗೆ ಇರಲಿದೆ. ಮೈವಿವಿಯಲ್ಲಿ ಕಾನೂನು ಶಾಲೆಯ ಪ್ರಾಧ್ಯಾಪಕರಾಗಿರುವ ಇವರು, ಈ ಹಿಂದೆ ಮೈಸೂರು ವಿಶ್ವವಿದ್ಯಾಲಯ ಆಡಳಿತಾತ್ಮಕ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ, ಹಂಗಾಮಿ ಕುಲಪತಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.