ಕಾರವಾರ: ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ನಗರದಲ್ಲಿ ವಿವಿಧ ಕಾಮಗಾರಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು. ನಗರದ ನೂತನ ಮೀನು ಮಾರುಕಟ್ಟೆ ಕಾಮಗಾರಿ ವೀಕ್ಷಿಸಿದ ಅವರು, ಮೇ ತಿಂಗಳಲ್ಲಿ ಮುಖ್ಯಮಂತ್ರಿ ಅವರನ್ನು ಕರೆಸಿ ಕಟ್ಟಡದ ಉದ್ಘಾಟನೆ ಮಾಡಿಸಲಾಗುವುದು ಎಂದರು. ಕೋಣೆನಾಲಾ ವೀಕ್ಷಿಸಿದ ಅವರು, ಗೋವಾದಲ್ಲಿ ಕೈಗೊಂಡ ತಂತ್ರಜ್ಞಾನದಲ್ಲಿ ಕೋಣೆನಾಲಾ ಅಭಿವೃದ್ಧಿಗೆ ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರಸಭೆ ಇಇ ಆರ್.ಪಿ.ನಾಯ್ಕ, ನಗರಸಭೆ ಸದಸ್ಯರು, ಬಿಜೆಪಿ ಮುಖಂಡರು ಇದ್ದರು.
ಭೂಮಿ ಪೂಜೆ: 17 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ಅಸ್ನೋಟಿ ಗ್ರಾಪಂ ವ್ಯಾಪ್ತಿಯ ಕೃಷ್ಣಾಪುರದಲ್ಲಿ ಕಾಂಕ್ರಿಟ್ ರಸ್ತೆ ನಿರ್ವಣ, 12 ಲಕ್ಷ ರೂ. ವೆಚ್ಚದಲ್ಲಿ ಪರವಾರವಾಡ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಾಲಿ ನಾಯ್ಕ ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಸಂಜಯ ಸಾಳುಂಕೆ, ಮಾರುತಿ ನಾಯ್ಕ, ಪ್ರಕಾಶ ಗುನಗಿ ಇದ್ದರು.