ಬಾಗಲಕೋಟೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಸೂಳಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಫ್‌ಎಸ್‌ಟಿಪಿ ಘಟಕ ನಿರ್ಮಾಣದ ಕಾಮಗಾರಿ ವೀಕ್ಷಣೆ ಮಾಡಿದರು.  
ಜಿಲ್ಲೆ

ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಿ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ಹಾಗೂ ಬಾದಾಮಿ ತಾಲೂಕಾ ವ್ಯಾಪ್ತಿಯಲ್ಲಿ ಕೈಗೊಂಡ ವಿವಿಧ ಕಾಮಗಾರಿಗಳನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಪರಿಶೀಲನೆ ನಡೆಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದರು.

ಗುರುವಾರ ಸೂಳಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಫ್‌ಎಸ್‌ಟಿಪಿ ಘಟಕ ನಿರ್ಮಾಣದ ಕಾಮಗಾರಿ, ಕಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್.ಆರ್.ಎಲ್.ಎಂ ಕಟ್ಟಡ ಕಾಮಗಾರಿ, ಗ್ರಾಮೀಣ ಕುಡಿಯುವ ನೀರು ಯೋಜನೆಯ ಪೈಪ್‌ಲೈನ್ ಕಾಮಗಾರಿ, ಅಂಗನವಾಡಿ ಕೇಂದ್ರ-೧ ಹಾಗೂ ಪಶು ಚಿಕಿತ್ಸಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಕೆಲವಡಿ ಗ್ರಾಮದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಭೇಟಿ, ತಿಮ್ಮಸಾಗರ ಅಂಗನವಾಡಿ ಕಟ್ಟಡ ಕಾಮಗಾರಿ ಪರಿಶೀಲನೆ, ಲಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು. ಕಬಡ್ಡಿ ಮತ್ತು ಖೋಖೋ ಮೈದಾನ ಕಾಮಗಾರಿ ವೀಕ್ಷಣೆ ಮಾಡಿದರು. ಹಂಸನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಜೆಎಂ ಯೋಜನೆಯ ಕಾಮಗಾರಿ, ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸಿ ಬಾಗಿಲು, ಜೆಜೆಎಂ ಕಾಮಗಾರಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಂಗಮAದಿರ ಕಾಮಗಾರಿ ಪರೀಲನೆ, ಪರ್ವತಿ ಗ್ರಾ.ಪಂ ವ್ಯಾಪ್ತಿಯ ನೂತನ ಶಾಲಾ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದರು. ಖಾನಾಪುರ ಎಸ್.ಪಿ ಗ್ರಾಮದ ಆದರ್ಶ ಗ್ರಾಮ, ಅಂಗನವಾಡಿ ಕಟ್ಟಡ ಹಾಗೂ ರಂಗಮAದಿರ ಪರೀಲನೆ ಮಾಡಿದರು. ಬಾದಾಮಿ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಗುಳೇದಗುಡ್ಡ ಹಾಗೂ ಬಾದಾಮಿ ತಾಲೂಕಾ ಮಟ್ಟದ ಅಽಕಾರಿಗಳೊಂದಿಗೆ ಸಭೆ ನಡೆಸಿದರು.

ಗುಳೇದಗುಡ್ಡ ತಾಲೂಕಿನ ಕಾರ್ಯನಿರ್ವಾಹಕ ಅಽಕಾರಿ ಮಲ್ಲಿಕಾರ್ಜುನ ಬಡಿಗೇರ, ಬಾದಾಮಿ ತಾಲೂಕಾ ಕಾರ್ಯನಿರ್ವಾಹಕ ಅಽಕಾರಿ ಸುರೇಶ ಪಿ., ಗ್ರಾಮೀಣ ಕುಡಿಯುವ ನೀರು ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಮಚಂದ್ರ ಸೇರಿದಂತೆ ಇತರರು ಇದ್ದರು.