ಹನುಮಸಾಗರ: ಗುತ್ತಿಗೆದಾರರು ಗುಣಮಟ್ಟದ ಕಟ್ಟಡ ನಿರ್ಮಿಸಿ ಮಕ್ಕಳ ಕಲಿಕೆಗೆ ಉತ್ತಮ ವಾತಾವರಣ ಸೃಷ್ಟಿಸಬೇಕು ಎಂದು ವಿಧಾನಸಭೆ ವಿಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ (ಪಿಯು ವಿಭಾಗ) ಕಾಲೇಜಿನಲ್ಲಿ ಶುಕ್ರವಾರ ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ನೆರವೇರಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯಿಂದ ಅಂದಾಜು 1.1 ಕೋಟಿ ರೂ. ವೆಚ್ಚದಲ್ಲಿ 5 ಕೊಠಡಿ ನಿರ್ಮಿಸಲಾಗುತ್ತಿದೆ. ಕ್ರಿಯಾಯೋಜನೆ ಪ್ರಕಾರ ಗುಣಮಟ್ಟದ ಸಾಮಗ್ರಿ ಬಳಸಿ ಕಟ್ಟಡ ನಿರ್ಮಾಣ ಮಾಡಬೇಕು ಎಂದರು.
ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ, ಪಿಡಿಒ ದೇವೇಂದ್ರಪ್ಪ ಕಮತರ, ಪ್ರಾಚಾರ್ಯ ಸಾಹೇಬಗೌಡ ಬಿರಾದಾರ, ಗುತ್ತಿಗೆದಾರ ದುರಗೇಶ ಮಡಿವಾಳರ, ಗ್ರಾಪಂ ಸದಸ್ಯರಾದ ಮರೇಗೌಡ ಬೋದೂರ, ರಮೇಶ ಬಡಿಗೇರ, ಪ್ರಮುಖರಾದ ಬಸವರಾಜ ಹಳ್ಳೂರ, ತಿಮ್ಮನಗೌಡ ಪೊಲೀಸ್‌ಪಾಟೀಲ್, ವೀರೇಶ ಕಟಗಿ, ನಾಗಾರಾಜ ಕಂದಗಲ್ಲ, ಮಂಜುನಾಥ ಶಿರೋಳ, ಉಪನ್ಯಾಸಕರು ಇದ್ದರು.