ಕಾರವಾರ: ಇಲ್ಲಿನ ನಗರಸಭೆಗೆ ಸ್ವಚ್ಛತೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ಭಾರತ ಸರ್ಕಾರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯದ ಇಂಡಿನ್ ಸ್ವಚ್ಛತಾ ಲೀಗ್ (ಐಎಸ್ ಎಲ್) ಪ್ರಶಸ್ತಿ ಲಭಿಸಿದೆ. ನವದೆಹಲಿಯಲ್ಲಿ ಸೆಪ್ಟೆಂಬರ್ 30 ರಂದು ನಡೆಯುವ ಸ್ವಚ್ಛ ನಗರ ಸಂವಾದ ಹಾಗೂ ತಂತ್ರಜ್ಞಾನ ಪ್ರದರ್ಶನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ದೇಶದ 1850 ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ, ಘನ ತ್ಯಾಜ್ಯ ವಿಲೇವಾರಿ, ಸ್ವಚ್ಛತೆ ಮುಂತಾದ ಅಂಶಗಳನ್ನು ಪರಿಶೀಲಿಸಲಾಗಿತ್ತು. ಅದರಲ್ಲಿ 50 ಸಾವಿರದಿಂದ 1 ಲಕ್ಷ ಜನಸಂಖ್ಯೆಯುಳ್ಳ ನಗರಗಳ ಪಟ್ಟಿಯಲ್ಲಿ ಕಾರವಾರ ಮೊದಲ ಸ್ಥಾನ ಪಡೆದಿದೆ.
3 ರಿಂದ 10 ಲಕ್ಷ ಜನಸಂಖ್ಯೆಯುಳ್ಳ ಮಹಾ ನಗರಗಳ ಪಟ್ಟಿಯಲ್ಲಿ ಮಂಗಳೂರು ನಗರ ಪಾಲಿಕೆ ಪ್ರಶಸ್ತಿ ಪಡೆದಿದೆ. ಮೈಸೂರು ಹಾಗೂ ಹೊಳಲ್ಕೆರೆ ನಗರ ಸ್ಥಳೀಯ ಸಂಸ್ಥೆಗಳಿಗೆ ವಿಶೇಷ ಬಹುಮಾನ ನೀಡಲಾಗುವುದು.