ತಾಲೂಕಿನ ಕೋಡಿಶೆಟ್ಟಿಪುರ ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನೋವಾ ಕಾರು ಡಿಕ್ಕಿಯಾಗಿ ಮೃತಪಟ್ಟ ಹಸುಗಳು. 
ಜಿಲ್ಲೆ

ಕಾರು ಡಿಕ್ಕಿಯಾಗಿ ಎರಡು ಹಸು ಸಾವು

ಶ್ರೀರಂಗಪಟ್ಟಣ: ತಾಲೂಕಿನ ಕೋಡಿಶೆಟ್ಟಿಪುರ ಗ್ರಾಮ ಮುಂಭಾಗದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿಕ್ಕಿಯಾಗಿ ಎರಡು ಹಸುಗಳು ಮೃತಪಟ್ಟಿವೆ. ಗ್ರಾಮದ ರೈತ ಜೈಸುಂದರ ಎಂಬುವರಿಗೆ ಸೇರಿದ ಈ ಜರ್ಸಿ ಹಸುಗಳನ್ನು ಅವರೇ ಬುಧವಾರ ಮುಂಜಾನೆ ಕೊಟ್ಟಿಗೆಯಿಂದ ಜಮೀನು ಕಡೆಗೆ ಮೇಯಲು ಕರೆದೊಯ್ಯುವ ವೇಳೆ ಬೆಂ-ಮೈ ರಾಷ್ಟ್ರೀಯ ಹೆದ್ದಾರಿ ದಾಟುವಾಗ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂಕಜೀವಿಗಳು ಅಸುನೀಗಿವೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಕಾರಿನ ಚಾಲಕ ರೈತನಿಗೆ ಧನ ಸಹಾಯ ಮಾಡಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರು ಮೃತ ಹಸುಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಿದ್ದಾರೆ.