ಗುಂಡ್ಲುಪೇಟೆ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಮೃತಪಟ್ಟ ಹೃದವಿದ್ರಾವಕ ಘಟನೆ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.
ಪಟ್ಟಣದ ಅಂಬೇಡ್ಕರ್ ಸರ್ಕಲ್ ನಿವಾಸಿಗಳಾದ ವಿಶ್ವನಾಥ್(60), ಭಾಗ್ಯ(48) ಮೃತ ದಂಪತಿ. ಸೋಮವಾರ ಮಧ್ಯಾಹ್ನ ಊಟಿ ರಸ್ತೆಯ ಐಟಿಐ ಕಾಲೇಜಿನ ಬಳಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಅತಿವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದರು.ಈ ಬಗ್ಗೆ ಪ್ರಕರಣ ದಾಖಲಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.