ಜಿಲ್ಲೆ

ಕಾರು ಡಿಕ್ಕಿಯಾಗಿ ಮಹಿಳೆ ಸಾವು

ಗುಂಡ್ಲುಪೇಟೆ:ತಾಲೂಕಿನ ತೆರಕಣಾಂಬಿಹುಂಡಿ ಗ್ರಾಮದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗ್ರಾಮದ ಚನ್ನಶೆಟ್ಟಿ ಅವರ ಪತ್ನಿ ದೇವಮ್ಮ(45) ಮೃತರು. ಶನಿವಾರ ರಾತ್ರಿ ಗ್ರಾಮದ ಸಂಗನ ಬಸವೇಶ್ವರ ದೇವಾಲಯದ ಬಳಿ ರಸ್ತೆ ದಾಟುವಾಗ ವೇಗವಾಗಿ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕಾರಿನ ಚಾಲಕ ದಿನೇಶ್ ಎಂಬಾತ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವೇಗವಾಗಿ ಸಾಗುವಾಗ ಬೊಮ್ಮನಹಳ್ಳಿ ರಸ್ತೆಯಲ್ಲಿ ಟಯರುಗಳು ಸಿಡಿದಿದ್ದರಿಂದ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಬಂದನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.