ಕೊಳ್ಳೇಗಾಲ: ಪಟ್ಟಣದ ಕಾರ್ನರ್ ಸ್ಟೋನ್ ಪಿಯು ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ ಮಾತನಾಡಿ, ರಾಜಮನೆತನಗಳು ಕನ್ನಡ ನಾಡು ಸಂಸ್ಕೃತಿಗೆ ಅನೇಕ ಕೊಡುಗೆ ನೀಡಿದ್ದಾರೆ. ವಚನ ಸಾಹಿತ್ಯ ಕನ್ನಡವನ್ನು ಶ್ರೀಮಂತಗೊಳಿಸಿದೆ. ವಚನಕ್ಕೆ ಬಸವಣ್ಣ, ಅಕ್ಕ ಮಹಾದೇವಿ, ಅಲ್ಲಮಪ್ರಭು, ಹಡಪದ ಅಪ್ಪಣ್ಣ, ಹರಳಯ್ಯ, ಆಯ್ದಕ್ಕಿ ಮಾರಯ್ಯ ದಂಪತಿ ಕೊಡುಗೆ ಅಪಾರ ಎಂದರು.
ಕಾಲೇಜು ಪ್ರಾಂಶುಪಾಲ ರೋಷನ್ ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿಗೆ ಕನ್ನಡ ಸಾಹಿತ್ಯ ಪರಿಷತ್ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ ಎಂದರು. ಹಿರಿಯ ಸಾಹಿತಿ ದೊಡ್ಡಲಿಂಗೇಗೌಡ, ಕಾಲೇಜು ಆಡಳಿತ ಮಂಡಳಿಯ ಮಲ್ಲೇಶ್, ಉಪನ್ಯಾಸಕ ವರ್ಗ ವಿದ್ಯಾರ್ಥಿಗಳು ಇದ್ದರು.