ಚಿಕ್ಕಮಗಳೂರು: ಕಾರ್ಮಿಕರಿಗೆ ಎಲ್ಲ ರೀತಿಯ ಚಿಕಿತ್ಸೆಗೆ ಒಳಗಾಗಿಸುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಆಧುನಿಕ ತಂತ್ರಜ್ಞಾನ ಹಾಗೂ ಪರಿಣಿತ ವೈದ್ಯರ ತಂಡದೊAದಿಗೆ ಸಂಚಾರಿ ಆರೋಗ್ಯ ವಾಹನವನ್ನು ಶ್ರಮಿಕರಿಗಾಗಿ ಪೂರೈಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.
ನಗರದ ಕಾರ್ಮಿಕ ಕಚೇರಿಯಲ್ಲಿ ಮಂಗಳವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ನೂತನ ಎರಡು ಸಂಚಾರಿ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ, ಕಟ್ಟಡ ಕಾರ್ಮಿಕರಿಗೆ ತುರ್ತು ಆರೋಗ್ಯ ಪರಿಸ್ಥಿತಿ ಕಂಡುಬAದ ಸಂದರ್ಭಗಳಲ್ಲಿ ಸಮೀಪದ ಆಸ್ಪತ್ರೆ ತೆ ಅಂಬುಲೆನ್ಸ್ ಮಾದರಿಯಲ್ಲಿ ಸೇವೆಯನ್ನು ಒದಗಿಸಿ, ತದನಂತರ ಮಂಡಳಿಯೊAದಿಗೆ ಸಮನ್ವಯ ಸಾಧಿಸಿ ಕಾರ್ಮಿಕರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಜೊತೆಗೆ ಪ್ರತಿ ವಾಹನದಲ್ಲೂ ಎಂಬಿಬಿಎಸ್ ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ ಎಂದರು.
ಸAಚಾರಿ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ ರಕ್ತದೊತ್ತಡ, ರಕ್ತಹೀನತೆ, ಅಪೌಷ್ಠಿಕತೆ, ತುರ್ತು ಔಷಧ, ಮೂರ್ಛೆರೋಗ, ಮಧುಮೇಹ, ಬಿಪಿ, ತಾಯಿಯ ಆರೋಗ್ಯ, ನವ ಜನನ ಮತ್ತು ಶಿಶು ಆರೋಗ್ಯ, ದೀರ್ಘಕಾಲದ ಸಂವಹನ ರೋಗಗಳ ನಿರ್ವಹಣೆ, ಕ್ಷಯರೋಗ, ಹೆಚ್‌ಐವಿ, ಕುಷ್ಠ, ಮಲೇರಿಯಾ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಚಿಕಿತ್ಸೆಯನ್ನು ಉಚಿತವಾಗಿ ನೀಡಲಿದೆ ಎಂದು ಹೇಳಿದರು.
ಪ್ರಸ್ತುತ ಜಿಲ್ಲೆಯಲ್ಲಿ ೧.೪೦ ಲಕ್ಷ ಕಾರ್ಮಿಕರು ಇಲಾಖೆಯಲ್ಲಿ ನೋಂದಾಯಿಸಿಕೊAಡಿದ್ದು, ಮದುವೆ, ವೈದ್ಯಕೀಯ ವೆಚ್ಚ, ಹೆರಿಗೆ ಸೌಲಭ್ಯವನ್ನು ನೀಡುತ್ತಿದೆ. ಪ್ರಸಕ್ತ ಸಾಲಿನ ಅಪಘಾತದಲ್ಲಿ ಮೃತರಾದ ಕಾರ್ಮಿಕರ ಕುಟುಂಬಕ್ಕೆ ರಾಜ್ಯಸರ್ಕಾರ ೫.೧೩ ಕೋಟಿ ಹಣವನ್ನು ನೇರ ಖಾತೆಗೆ ಜಮಾಯಿಸಿ ನೊಂದವರಿಗೆ ಆಸರೆಯಾಗಿದೆ ಎಂದರು.
ಈಗಾಗಲೇ ರಾಜ್ಯದಲ್ಲಿ ೪೬ ಕೋಟಿ ರೂ. ವೆಚ್ಚದಲ್ಲಿ ಒಟ್ಟು ೧೦೦ ವಾಹನಗಳನ್ನು ರಾಜ್ಯಾದ್ಯಂತ ಸಂಚರಿಸುತ್ತಿದ್ದು ಎಲ್ಲಾ ಕಾರ್ಮಿಕರು ಮತ್ತು ಅವಲಂಬಿತರಿಗೆ ಅಗತ್ಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಕಾರ್ಮಿಕರಿರುವ ಸ್ಥಳಕ್ಕೆ ತೆರಳಿ ನೀಡುತ್ತಿದೆ. ಅದರಂತೆ ಜಿಲ್ಲಾ ಕೇಂದ್ರಕ್ಕೂ ಎರಡು ವಾಹನಗಳನ್ನು ನೀಡಿ ಕಾರ್ಮಿಕರಿಗೆ ಸ್ಪಂದಿಸಿದೆ ಎಂದು ಹೇಳಿದರು.
ಕಾರ್ಮಿಕರ ಬದುಕಿನ ಶ್ರೇಯೋಭಿವೃದ್ಧಿಗಾಗಿ ಕಟ್ಟಡ ನಿರ್ಮಿಸುವ ಮಾಲೀಕರಿಂದ ಶೇ. ೧ರ ಸುಂಕವನ್ನು ಕಾರ್ಮಿಕ ಇಲಾಖೆಗೆ ಕಡ್ಡಾಯಗೊಳಿಸಿದ್ದು ಇದರಿಂದ ಬಡಕಾರ್ಮಿಕ ವರ್ಗಕ್ಕೆ ಸಕಲ ಸವಲತ್ತನ್ನು ಪೂರೈಸಿ ತುರ್ತು ವೇಳೆಯಲ್ಲಿ ಸಹಕರಿಸುತ್ತಿದೆ. ಜೊತೆಗೆ ವಾಹನದಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಶುಶ್ರೂಷಕರು ಸೇವಾಮನೋಭಾವನದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಮಿಕ ಅಧಿಕಾರಿ ಸುರೇಶ್ ಮಾತನಾಡಿ, ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನವು ಕಾರ್ಮಿಕರು ತುರ್ತು ಸಂದರ್ಭದಲ್ಲಿ ಸ್ಪಂದಿಸಲು ರಾಜ್ಯಸರ್ಕಾರ ಎರಡು ವಾಹಗಳನ್ನು ಒದಗಿಸಿಕೊಟ್ಟಿದೆ. ೨೦ಕ್ಕೂ ಹೆಚ್ಚು ವಿವಿಧ ಸೌಲಭ್ಯಗಳು ಈ ವಾಹನದಿಂದ ಅಡಕವಾದಂತಾಗಿದೆ ಎಂದು ತಿಳಿಸಿದರು.
ಇದೇ ವೇಳೆ ೨೦ ಬಡಗಾರೆ ಕೆಲಸಗಾರರಿಗೆ ಟೂಲ್‌ಕಿಟ್ ಹಾಗೂ ಅಪಘಾತದಲ್ಲಿ ಮೃತಪಟ್ಟ ವಾಣಿಜ್ಯ ಚಾಲಕರ ಈರ್ವರ ಕುಟುಂಬಕ್ಕೆ ತಲಾ ೫ ಲಕ್ಷ ರೂ. ಪರಿಹಾರದ ಆದೇಶ ಪ್ರತಿಯನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಎಂ.ಸುಭಾಶ್, ಕಾರ್ಮಿಕ ನಿರೀಕ್ಷಕರಾದ ಪ್ರಭಾಕರ್, ಪ್ರವೀಣ್‌ಕುಮಾರ್, ತರೀಕೆರೆ ಕಾರ್ಮಿಕ ನಿರೀಕ್ಷಕ ಮಹಾದೇವಪ್ಪ, ಕಾರ್ಮಿಕ ಕಲ್ಯಾಣ ಮಂಡಳಿ ಅಭಿಯಂತರ ಹ್ಯಾರಿಸ್ ಮತ್ತಿತರರಿದ್ದರು.