ಕಾರ್ಮಿಕರ ಕೆಲಸದ ಅವ ಹೆಚ್ಚಳ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಸಿಐಟಿಯು ಜಿಲ್ಲಾಧ್ಯಕ್ಷೆ ಹೆಚ್. ಪದ್ಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಸಮಿತಿ ಪದಾಕಾರಿಗಳಾದ ತಿಮ್ಮಪ್ಪ ಸ್ವಾಮಿ, ಶ್ರೀಶೈಲರೆಡ್ಡಿ, ಆನಂದ, ಎಂ.ರವಿ, ಯಲ್ಲಪ್ಪ, ಅಕ್ಕಮಹಾದೇವಿ, ಜಿಲಾನಿ ಪಾಷಾ, ಶರಣಪ್ಪ, ಶರಣಮ್ಮ, ಗೋಕರಮ್ಮ ಇದ್ದರು. 
ಜಿಲ್ಲೆ

ಕಾರ್ಮಿಕರ ಕೆಲಸದ ಸಮಯ ಹೆಚ್ಚಳ ಬೇಡ

ರಾಯಚೂರು: ಕಾರ್ಮಿಕ ಕೆಲಸದ ಸಮಯ ದಿನಕ್ಕೆ 12 ಗಂಟೆಗೆ ಹೆಚ್ಚಿಸಿರುವ ಆದೇಶವನ್ನು ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಕಾರ್ಮಿಕರ ಕನಿಷ್ಠ ವೇತನವನ್ನು 31,500 ರೂ.ಗೆ ಹೆಚ್ಚಳ ಮಾಡಬೇಕು. ಕಾರ್ಮಿಕ ವಿರೋ ಲೇಬರ್ ಕೋಡ್ ರದ್ದು ಪಡಿಸಬೇಕು. ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು, ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ದಿನಗಳನ್ನು 200 ದಿನಕ್ಕೆ ಹೆಚ್ಚಳ ಮಾಡಬೇಕು. ಅಂಗನವಾಡಿ, ಬಿಸಿಯೂಟ ಮತ್ತು ಆಶಾ ಕಾರ್ಮಿಕರನ್ನು ಕನಿಷ್ಠ ವೇತನ ವ್ಯಾಪ್ತಿಗೆ ಒಳಪಡಿಸಬೇಕು. ವಲಸೆ ಕಾರ್ಮಿಕರಿಗೆ ಸೇವಾ ಭದ್ರತೆ ಮತ್ತು ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿ ಮಾಡಬೇಕು.
ಅಸಂಘಟಿತ ವಲಯದ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಗೊಳಿಸಿ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು, ವಿದುಚ್ಛಕ್ತಿ ಮಸೂದೆ 2020ನ್ನು ಹಿಂಪಡೆಯಬೇಕು ಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಹೆಚ್. ಪದ್ಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಸ್. ಶರಣಬಸವ, ಸಮಿತಿ ಪದಾಕಾರಿಗಳಾದ ತಿಮ್ಮಪ್ಪ ಸ್ವಾಮಿ, ಶ್ರೀಶೈಲರೆಡ್ಡಿ, ಆನಂದ, ಎಂ.ರವಿ, ಯಲ್ಲಪ್ಪ, ಅಕ್ಕಮಹಾದೇವಿ, ಜಿಲಾನಿ ಪಾಷಾ, ಶರಣಪ್ಪ, ಶರಣಮ್ಮ, ಗೋಕರಮ್ಮ ಪಾಲ್ಗೊಂಡಿದ್ದರು.