ಜಿಲ್ಲೆ

ಕಾರ್ಮಿಕರನ್ನು ನಿರ್ಲಕ್ಷಿಸ ಬೇಡಿ

ಬಾಗಲಕೋಟೆ: ಪ್ರತಿನಿತ್ಯದ ಉಪಯುಕ್ತ ಕಾರ್ಯಗಳಿಗೆ ಸೇವೆ ಸಲ್ಲಿಸುತ್ತಿರುವ ಸಂಘಟಿತ ಅಸಂಘಡಿತ ದಿನಗೂಲಿ ಸೇರಿದಂತೆ ಕಾರ್ಮಿಕರನ್ನು ನಿರ್ಲಕ್ಷಿಸಬೇಡಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಽÃಶ ಎನ್.ವಿ.ವಿಜಯ ಹೇಳಿದರು.

ನೂತನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರ, ಕಾರ್ಮಿಕ ಇಲಾಖೆ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ತ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಸಹಯೋಗದಲ್ಲಿ ಉದ್ಯೋಗದಾತರು, ಗುತ್ತಿಗೆದಾರ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಽಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕರ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕರ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗುತ್ತಿಗೆದಾರರ ಬಳಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ರೀತಿಯ ಭದ್ರತೆ ಇರುವದಿಲ್ಲ. ಅಂತಹ ಸಮಯದಲ್ಲಿ ಬಹುಮಹಡಿ ಕಟ್ಟಡಗಳ ಮೇಲಿಂದ ಬಿದ್ದು, ಅಲ್ಲದೇ ಇತರೆ ಅವಘಡಕ್ಕೆ ಒಳಗಾಗಿ ಜೀವ ಹಾನಿಯಾದ ವರದಿ ಇತ್ತೀಚೆಗೆ ನಡೆದಿದ್ದು, ಅಂತಹ ಕಾರ್ಮಿಕರಿಗೆ ಗುತ್ತಿಗೆದಾರರದಿಂದ ಸೂಕ್ತ ಪರಿಹಾರ ನೀಡುವ ಕಾರ್ಯವಾಗಬೇಕು. ಅಂದಾಗ ಮಾತ್ರ ಕಾರ್ಮಿಕರಿಗೆ ಆತ್ಮಸ್ಥÊೆರ್ಯ ಬರಲು ಸಾಧ್ಯವಿದೆ ಎಂದರು.

ಜಿಲ್ಲಾಽಕಾರಿ ಜಾನಕಿ ಕೆ.ಎಂ. ಮಾತನಾಡಿ, ಸಂಘಟಿತರಾಗಲಿ ಹಾಗೂ ಅಸಂಘಟಿತರಾಗಲಿ ಯಾರು ಕನಿಷ್ಟರಲ್ಲ ಎಂಬುದನ್ನು ಅರಿತು ಕಾರ್ಮಿಕ ಇಲಾಖೆಯಿಂದ ದೊರೆಯಬಹುದಾದ ಸೌಲಭ್ಯಗಳನ್ನು ಒದಗಿಸಿ ಕೊಡಲು ತಿಳಿಸಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿ, ಸರ್ಕಾರಿ ಇಲಾಖೆಯ ಗುತ್ತಿಗೆದಾರರಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ತೊಂದರೆಯಾದಲ್ಲಿ ಇಲಾಖಾ ಅಽಕಾರಿ ಹಾಗೂ ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ ಅಽಕಾರಿಗಳು ಕಾರ್ಮಿಕರಿಗೆ ನಿಗದಿಪಡಿಸಿದ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಆಗಬೇಕು ಎಂದರು.

ಜಿಲ್ಲಾ ಕಾರ್ಮಿಕ ಅಽಕಾರಿ ರಮೇಶ ಸುಂಬಡ ಮಾತನಾಡಿ, ಇದುವರೆಗೂ ಬಾಗಲಕೋಟೆ ಜಿಲ್ಲೆಯಲ್ಲಿ ಕಾರ್ಮಿಕರಿಗೆ ದೊರೆಯಬಹುದಾದ ಹಾಗೂ ಅವರವರ ಉದ್ಯೋಗಕ್ಕೆ ಅನುಗುಣವಾದ ಕಿಟ್‌ಗಳನ್ನು ವಿತರಿಸಲಾಗಿದ್ದು, ಇನ್ನುಳಿದ ಸೌಲಭ್ಯಗಳನ್ನು ಸಹ ಒದಗಿಸಿಕೊಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ವಕೀಲರ ಸಂಘದ ಅಧ್ಯಕ್ಷ ರಮೇಶ ಬದ್ನೂರ, ಕಾರ್ಮಿಕ ನಿರೀಕ್ಷಕ ಪಾಂಡುರಂಗ ಮಾವರಕರ, ರಾಜಶೇಖರ ಕುರಡಿಕೇರಿ, ರಮೇಶ ವಂಗಿ, ಜಿಲ್ಲಾ ಬಾಲ ಕಾರ್ಮಿಕ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.