ಜಿಲ್ಲೆ

ಕಾರ್ಮಿಕರಿಗೆ ಪಡಿತರ ಚೀಟಿ ವಿತರಣೆ

ಚಾಮರಾಜನಗರ: ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ: 1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.