ಚಿತ್ರದುರ್ಗ : ಸ್ಥಳೀಯ ಸಂಸ್ಥೆಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನ.23 ರಂದು ಉಪ ಚುನಾವಣೆ ನಡೆಯಲಿದ್ದು ಕಾರ್ಮಿಕರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಚಿತ್ರದುರ್ಗ ನಗರಸಭೆಯ 15ನೇ ವಾರ್ಡ್, ಚಳ್ಳಕೆರೆ ನಗರಸಭೆಯ 4 ನೇ ವಾರ್ಡ್, ನಾಯಕನಹಟ್ಟಿ ಪಪಂನ 1 ನೇ ವಾರ್ಡ್‌ನಲ್ಲಿ ಮತದಾನ ನಡೆಯಲಿದೆ.
ಈ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯ ಕಾರ್ಖಾನೆಗಳು, ಗಾರ್ಮೆಂಟ್,ಅಂಗಡಿ ವಾಣಿಜ್ಯ ಸಂಸ್ಥೆಗಳ ಕಾರ್ಮಿಕರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲು ಉದ್ಯೋಗದಾತರಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಇಬ್ರಾಹಿಂ ಸಾಬ್ ತಿಳಿಸಿದ್ದಾರೆ.
----