ಚಾಮರಾಜನಗರ: ಸರ್ಕಾರ ನೀಡುವ ಸೌಲಭ್ಯಗಳನ್ನು ಕಟ್ಟಡ ಕಾರ್ಮಿಕರು ಬಳಕೆ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ತಿಳಿಸಿದರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಧನ, 60 ವರ್ಷ ಮೇಲ್ಪಟ್ಟ ಕಾರ್ಮಿಕರಿಗೆ ಪಿಂಚಣಿ, ವಿಮಾ ಸೌಲಭ್ಯ, ವಸತಿ ಯೋಜನೆ ಸೇರಿದಂತೆ ಅನೇಕ ಕಾರ್ಯಕ್ರಮ ಜಾರಿಗೊಳಿಸಿವೆ. ಕಟ್ಟಡ ಕಾರ್ಮಿಕರು ಗುರುತಿನ ಚೀಟಿ ಮಾಡಿಸಿ ಪ್ರಯೋಜನ ಪಡೆದು ಕೊಳ್ಳಬೇಕು ಎಂದು ಸಲಹೆ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಡಿ.ಎಲ್. ಕುಮಾರ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ವಿಶ್ವಕರ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಖಜಾಂಚಿ ಕುಮಾರ್ ನಾಗವಳ್ಳಿ, ಮುಖಂಡರಾದ ಸುಂದರ್, ರಾಚಪ್ಪ, ಮರಿಸ್ವಾಮಿ ಚಂದಕವಾಡಿ, ಕೃಷ್ಣಾಚಾರ್, ಕೆಂಪರಾಜು ಇದ್ದರು.