ಯಾದಗಿರಿ: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶದಿಂದ ರಾಜ್ಯ ಸರಕಾರ ಘೋಷಿಸಿರುವ ಗೃಹಲಕ್ಷ್ಮೀ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸಂಬಂಧಪಟ್ಟ ಇಲಾಖೆ ಅಕಾರಿಗಳು ಶ್ರಮಿಸುವಂತೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ನಿದರ್ೇಶನ ನೀಡಿದರು.
ಸೋಮವಾರ ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಗೃಹಲಕ್ಷ್ಮೀ ಯೋಜನೆ ನಗದು ಸೌಲಭ್ಯ ಫಲಾನುಭವಿಗಳ ಖಾತೆಗೆ ವಗರ್ಾವಣೆ ಮಾಡಲು ಚಾಲನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಯೋಜನೆಗೆ ಆ.27 ರಂದು ಚಾಲನೆ ನೀಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಪಾಲ್ಗೊಳ್ಳುವಂತೆ ಮಾಡಿ, ಮಂಜೂರಾತಿ ಪತ್ರ ವಿತರಿಸಲು ಕ್ರಮವಹಿಸಬೇಕು ಎಂದು ಅಕಾರಿಗಳಿಗೆ ಸೂಚಿಸಿದರು.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ನೋಂದಣಿಯಾದ ಅರ್ಹ ಫಲಾನುಭವಿಗಳ ಖಾತೆಗೆ ಹಣವನ್ನು ಡಿಬಿಟಿ ಮೂಲಕ ವಗರ್ಾವಣೆ ಮನಾಡುವ ಪ್ರಕ್ರಿಯೆ ಈ ತಿಂಗಳಿನಿಂದ ಜಾರಿಗೆ ಬರಲಿದೆ. ಮುಖ್ಯ ಕಾರ್ಯಕ್ರಮ ಬೆಳಗಾವಿಯಲ್ಲಿ ಚಾಲನೆಗೊಂಡರೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅದೇ ದಿನದಿಂದ ಏಕಕಾಲಕ್ಕೆ ಜಾರಿಗೆ ಚಾಲನೆಗೊಳ್ಳಲಿದೆ ಎಂದರು.
ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಕ್ತ ಮೇಲ್ವಿಚಾರಣೆ ಕೈಗೊಳ್ಳಲು ತಾಲೂಕಾ ನೋಡಲ್ ಅಕಾರಿಗಳನ್ನು ನೇಮಿಸಿ ಆದೇಶಿಸಲಾಗಿದ್ದು, ತಮ್ಮ ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮಗಳ ಆಯೋಜಿಸುವ ಬಗ್ಗೆ ಮೇಲ್ವಿಚಾರಣೆ ಕೈಗೊಂಡು ಕಾಲಕಾಲಕ್ಕೆ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು. ಸಮಾರಂಭ ನಡೆಸಲು ಸೂಕ್ತ ಸ್ಥಳಗಳನ್ನು ಗುರುತಿಸುವುದು, ಪ್ರತಿಯೊಂದು ಸ್ಥಳೀಯ ಕಾರ್ಯಕ್ರಮದಲ್ಲಿ ಕನಿಷ್ಠ 200 ಫಲಾನುಭವಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಜಿಪಂ ಸಿಇಒ ಗರೀಮಾ ಪನ್ವಾರ ಮಾತನಾಡಿ, ಈ ಯೋಜನೆಯ ಸೌಲಭ್ಯ ವಿತರಣೆ ಕಾರ್ಯಕ್ರಮಗಳನ್ನು ಗ್ರಾಪಂ ಮಟ್ಟದಲ್ಲಿ ಆಯೋಜಿಸಲು ಪ್ರತಿ ಗ್ರಾಪಂ ಮಟ್ಟದಲ್ಲಿ ಈಗಾಗಲೇ ನೋಡೆಲ್ ಅಕಾರಿಗಳನ್ನು ನೇಮಕ ಮಾಡಲಾಗಿದೆ. ಅಂಗನವಾಡಿ ಕಾರ್ಯಕತರ್ೆ, ಎನ್ಆರ್ಎಲ್ಎಂ, ಸ್ತ್ರೀಶಕ್ತಿ ಸಂಘದ ಸದಸ್ಯರಿಂದ ಹೆಚ್ಚಿನ ಪ್ರಚಾರ ಪಡಿಸಿ ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಹಾಜರಗುವಂತೆ ನೋಡಿಕೊಳ್ಳಲು ಸೂಚಿಸಿದರು.
ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಕಾರಿ ವೀರನಗೌಡ, ಕೈಗಾರಿಕಾ ಇಲಾಖೆ ಜಂಟಿ ನಿದರ್ೇಶಕಿ ರೇಖಾ ಮ್ಯಾಗೇರಿ, ನಗರಸಭೆ ಪೌರಾಯುಕ್ತ ಸಂಗಪ್ಪ ಉಪಾಸೆ, ಜಂಟಿ ಕೃಷಿ ನಿದರ್ೇಶಕ ಅಭಿದ್ ಇದ್ದರು.