ಹನೂರು: ಪ್ರತಿಯೊಬ್ಬರೂ 40 ವರ್ಷದ ಬಳಿಕ ಕಾಲಕಾಲಕ್ಕೆ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯ ಡಾ.ಪ್ರವೀಣ್ ರಾಜಣ್ಣ ಸಲಹೆ ನೀಡಿದರು.
ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಲಯನ್ಸ್ ಸಂಸ್ಥೆ ಹಾಗೂ ಮಣಿಪಾಲ್ ಆಸ್ಪತ್ರೆ ವತಿಯಿಂದ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚನ ದಿನಗಳಲ್ಲಿ ಕೆಲವರು ಕೆಲಸದ ಒತ್ತಡ ಹಾಗೂ ಇನ್ನಿತರ ಕಾರಣದಿಂದ ಆರೋಗ್ಯದ ಬಗ್ಗೆ ಗಮನ ನೀಡುತ್ತಿಲ್ಲ. ಇದರಿಂದ ಸಣ್ಣ ವಯಸ್ಸಿಗೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು. ಪೌಷ್ಟಿಕ ಆಹಾರ, ಸೊಪ್ಪು, ತರಕಾರಿಗಳನ್ನು ಹೆಚ್ಚು ಸೇವಿಸಬೇಕು ಎಂದು ಹೇಳಿದರು. ಲಯನ್ಸ್ ಸಂಸ್ಥೆ ಅಧ್ಯಕ್ಷ ವೆಂಕಟೇಶ್‌ಬಾಬು, ಕಾರ್ಯದರ್ಶಿ ಚೇತನ್, ಸದಸ್ಯ ಮಾದೇಶ್, ನಾಗರಾಜು, ಶಿಬಿರದ ಸಂಯೋಜಕ ಸುನೀಲ್ ಹಾಗೂ ಆಸ್ಪತ್ರೆಗೆ ಸಿಬ್ಬಂದಿ ಇದ್ದರು.