ಚಿಕ್ಕಮಗಳೂರು: ಕಾಲೇಜು ಶಿಕ್ಷಣದ ನಂತರ ವಿವಿಧ ಕ್ಷೇತ್ರಗಳಲ್ಲಿ ಅಗತ್ಯ ಕೌಶಲ್ಯಗಳನ್ನು ಬೆಳೆಸಿಕೊಂಡಲ್ಲಿ ಮಾತ್ರ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಲು ಸಾಧ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ವೈ.ಆಲದಾರ್ತಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸೆಪ್ಟೆಂಬರ್ ೨ ರಿಂದ ೧೨ ರವರೆಗೆ ೧೦ ದಿನಗಳ ಕಾಲದ ವಿಶೇಷ ಜಾಗೃತಿ ಅಭಿಯಾನದ ಅಂಗವಾಗಿ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ನಾಯಕತ್ವ ಮತ್ತು ಉದ್ಯೋಗಗಳಿಗೆ ಸಂಬAಧಿಸಿದ ನಿರ್ಧಾರ ತೆಗೆದುಕೊಳ್ಳುವ ಕೌಶಲ್ಯದ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಕಾರ್ಯಕ್ರಮ ನಿಮ್ಮ ಭವಿಷ್ಯದ ದಾರಿಗೆ ದಾರಿದೀಪ ಎಂದು ತಿಳಿಸಿದರು.
ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಮೂಡಲಗಿರಿಯಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಸತ್ಪೆçಜೆಗಳಾಗಿ ರೂಪುಗೊಳ್ಳಲು ಶಿಕ್ಷಣ ಒಂದು ಅಡಿಪಾಯ. ಈ ನಿಟ್ಟಿನಲ್ಲಿ ಬಂದAತಹ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಚ್.ಸಿ.ಪ್ರಶಾಂತ್ ಮಾತನಾಡಿ, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ತಮ್ಮ ವೃತ್ತಿ ಜೀವನದಲ್ಲಿ ಅಗತ್ಯವಾದ ಇತರ ಕೌಶಲ್ಯಗಳನ್ನು ಈಗಿನಿಂದಲೇ ಅಳವಡಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ನಿರೂಪಣಾಧಿಕಾರಿ ಡಿ.ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್, ಸಹ ಪ್ರಾಧ್ಯಾಪಕ ಎಸ್.ಎಂ.ನಟೇಶ್ ಹಾಗೂ ಎ.ಆರ್.ಶಿವರಾಜು, ಡೇ ನಲ್ಡ್ ಅಭಿಯಾನ ವ್ಯವಸ್ಥಾಪಕ ಹರ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದರ್ಶಿನಿ ಮತ್ತು ದಯಾನಂದ್ ಉಪಸ್ಥಿತರಿದ್ದರು.