ಜಿಲ್ಲೆ

ಕಾಳಜಿ ಕೇಂದ್ರಕ್ಕೆ ಪೊನ್ನಣ್ಣ ಭೇಟಿ

ಗೋಣಿಕೊಪ್ಪಲು: ಪೊನ್ನಂಪೇಟೆ ತಾಲೂಕಿನ ಬಲ್ಯಮಂಡೂರಿನಲ್ಲಿ ತೆರೆಯಲಾಗಿರುವ ಕಾಳಜಿ ಕೇಂದ್ರಕ್ಕೆ ಭಾನುವಾರ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾಡಳಿತದ ಸೂಚನೆಯಂತೆ, ಈ ಹಿಂದೆ ಬಲ್ಯಮುಂಡೂರು ಭಾಗದ ಹಲವು ನಿವಾಸಿಗಳನ್ನು ಸುರಕ್ಷತೆಗಾಗಿ ಕಾಳಜಿ ಕೇಂದ್ರದಲ್ಲಿ ಇರಿಸಲಾಗಿದ್ದು, ಕೇಂದ್ರಕ್ಕೆ ತೆರಳಿದ ಶಾಸಕರು ಅಲ್ಲಿಯ ಜನರ ಕ್ಷೇಮವನ್ನು ವಿಚಾರಿಸಿ, ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಶೀಘ್ರದಲ್ಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸುವುದಾಗಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ರಾಜ ಕಾರ್ಯಪ್ಪ, ಹಿರಿಯ ಕಾಂಗ್ರೆಸ್ ಮುಖಂಡ ಪೊನ್ನಪ್ಪ, ಪಕ್ಷದ ಪ್ರಮುಖರು, ತಹಸೀಲ್ದಾರ್ ಇತರರಿದ್ದರು.