ಗುಬ್ಬಿ: ತಾಲೂಕಿನ ಕಡಬ ಹೋಬಳಿಯ ಮಾರಶೆಟ್ಟಿಹಳ್ಳಿ ಗ್ರಾಮದ ಮಹೇಶ್ ಅವರು ಬೆಳೆಸಿದ್ದ 2 ವರ್ಷದ 250ಕ್ಕೂ ಹೆಚ್ಚು ಅಡಕೆ ಸಸಿಗಳನ್ನು ಸೋಮವಾರ ಮುಂಜಾನೆ ಕಿಡಿಗೇಡಿಗಳು ಕಿತ್ತು ಹಾಕಿದ್ದಾರೆ. ಕಳೆದ ವರ್ಷವೂ ಸುಮಾರು 500 ಗಿಡಗಳನ್ನು ಇದೇ ರೀತಿ ಕತ್ತರಿಸಿದ್ದರು. ಈಗ ಮತ್ತೆ ಅದೇ ಕೃತ್ಯ ಎಸಗಿರುವ ಕಿಡಿಗೇಡಿಗಳು 250ಕ್ಕೂ ಹೆಚ್ಚು ಅಡಕೆೆ ಸಸಿಗಳನ್ನು ಕಿತ್ತು ಹಾಕಿದ್ದಾರೆ. ಕಳೆದ ವರ್ಷ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಗೆ ದೂರು ದಾಖಲು ಮಾಡಲಾಗಿತ್ತು. ಆದರೆ ಪ್ರಯೋಜನವಾಗಿಲ್ಲ. ಈ ಬಾರಿಯೂ ಅಡಕೆ ಸಸಿಗಳನ್ನು ಕಿಡಿಗೇಡಿಗಳು ಕಿತ್ತು ಹಾಕಿದ್ದು, ಅವರಿಗೆ ಕಾನೂನು ಪ್ರಕಾರ ಶಿಕ್ಷೆ ನೀಡಬೇಕು ಎಂದು ರೈತ ಮಹೇಶ್ ಒತ್ತಾಯಿಸಿದರು.