ಬಾಗಲಕೋಟೆ: ಕಿತ್ತೂರ ಚನ್ನಮ್ಮ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಕಿತ್ತೂರ ಉತ್ಸವದ ಜ್ಯೋತಿ ಯಾತ್ರೆಯು ಶನಿವಾರ ಬಾಗಲಕೋಟೆಗೆ ಆಗಮಿಸಿದಾಗ ಜಿಲ್ಲಾಡಳಿತದ ವತಿಯಿಂದ ಜ್ಯೋತಿಯಾತ್ರೆಯನ್ನು ಸ್ವಾಗತಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ಸಮುದಾಯ ಮುಖಂಡರು ಇದ್ದರು.