ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅ. 23ರಂದು ಮಧ್ಯಾಹ್ನ 12 ಗಂಟೆಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಽಕಾರಿ ಗೀತಾ ಸಿ.ಡಿ. ಹೇಳಿದರು.
ಇಲ್ಲಿನ ಜಿಲ್ಲಾಽಕಾರಿ ಕಚೇರಿ ಸಭಾಭವನದಲ್ಲಿ ಸೋಮವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅ. 16ರಂದು ಕಿತ್ತೂರು ರಾಣಿ ಚನ್ನಮ್ಮ ವಿಜಯ ಜ್ಯೋತಿ ಯಾತ್ರಾ ರಥವು ನಗರಕ್ಕೆ ಆಗಮಿಸಲಿದೆ. ಅಂದು 11 ಗಂಟೆಗೆ ಜಿಲ್ಲಾಽಕಾರಿ ಕಚೇರಿ ಎದುರು ರಥಕ್ಕೆ ಪೂಜೆ ಸಲ್ಲಿಸಲಾಗುವುದು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾನಗರ ಪಾಲಿಕೆ ಸದಸ್ಯ ಶಂಭು ಸಾಲಮನಿ, ಸಮಾಜದ ಮುಖಂಡರಾದ ನಿಂಗಣ್ಣ ಕರಿಕಟ್ಟಿ, ನಿಂಗನಗೌಡ ಪಾಟೀಲ, ಮಡಿವಾಳಪ್ಪ ಸರಿಯಣ್ಣನವರ, ಎಸ್.ಜಿ. ಪಾಟೀಲ, ಇತರರಿದ್ದರು.