ಚಿಕ್ಕಮಗಳೂರಿನ ಸಂಸದರ ಕಚೇರಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಾರ್ವಜನಿಕರಿಂದ ಅಹವಾಲು ಆಲಿಸಿದರು. 
ಜಿಲ್ಲೆ

ಕುಂದು ಕೊರತೆ ಆಲಿಕೆ

ಚಿಕ್ಕಮಗಳೂರು: ಜಿಲ್ಲೆಯ ಸಂಸದರ ಕಚೇರಿಯಲ್ಲಿ ಮಂಗಳವಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕ್ಷೇತ್ರದ ಸಾರ್ವಜನಿಕರಿಂದ ಕುಂದುಕೊರತೆ ಆಲಿಸಿದರು.

ಜನರ ಸಮಸ್ಯೆ ಆಲಿಸಿ ಅಹವಾಲು ಸ್ವೀಕರಿಸಿದ ಸಂಸದರು ಕೆಲ ಅರ್ಜಿಗಳಿಗೆ ಸ್ಥಳದಲ್ಲಿಯೇ ಸಂಬAಧಪಟ್ಟ ಅಧಿಕಾರಿಗಳಿಗೆ ಕರೆಮಾಡಿ ಸಮಸ್ಯೆಗಳ ಪರಿಹಾರಕ್ಕೆ ಸೂಚಿಸಿದರು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿದರು. ವಿಶ್ವಕರ್ಮ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಫಲಾನುಭವಿಗಳ ಸಮಸ್ಯೆ ಆಲಿಸಿದರು.

ವಿಶ್ವಕರ್ಮ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ಕರೆಯುವಂತೆ ಕರ್ನಾಟಕ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆಯಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಸುಮಾರು ೬೦ ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಇಲಾಖೆಗಳ ಸಮನ್ವಯತೆ ಕೊರತೆಯಿಂದ ಯೋಜನೆ, ಕುಶಲಕರ್ಮಿಗಳಿಗೆ ಅದರಲ್ಲೂ ಬಡವರಿಗೆ ತಲುಪಲು ವಿಳಂಬವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೌಶಲ್ಯಾಭಿವೃದ್ಧಿ ಮತ್ತು ಕೈಗಾರಿಕಾ ಇಲಾಖೆಗಳೊಂದಿಗೆ ರಾಷ್ಟಿçÃಕೃತ ಬ್ಯಾಂಕ್‌ಗಳ ಸಹಯೋಗದಲ್ಲಿ ಪ್ರಕಟಿತ ಸಾಂಪ್ರದಾಯಕ ಕುಲಕಸುಬುದಾರರಿಗೆ ವಿಶ್ವಕರ್ಮ ಯೋಜನೆಯ ಲಾಭ ಸಿಗಬೇಕು. ಆದರೆ ಜಿಲ್ಲಾಧಿಕಾರಿಗಳು ಮತ್ತು ಇತರ ಇಲಾಖಾಧಿಕಾರಿಗಳ ಸಮನ್ವಯದ ಕೊರತೆಯಿಂದ ಕೇಂದ್ರ ಸರ್ಕಾರದ ೧೩ ಸಾವಿರ ಕೋಟಿ ರೂ., ಭದ್ರತೆ ಹೊಂದಿರುವ ವಿಶ್ವಕರ್ಮ ಯೋಜನೆಯ ಪ್ರಗತಿ ಹಿನ್ನಡೆಯಾಗಿದೆ ಎಂದರು.

ಬಡವರ ಕಲ್ಯಾಣ ಯೋಜನೆ ಎಂಬ ಮಾಹಿತಿಯನ್ನು ಪ್ರತಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ತಲುಪಿಸಿ, ವಿಶ್ವಕರ್ಮ ಯೋಜನೆಯ ಬಗ್ಗೆ ಜಿಲ್ಲೆಯಲ್ಲಿ ಪ್ರತಿ ೧೫ ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ ಮಾಡಲು ಆದೇಶ ನೀಡಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದು ಹೇಳಿದರು.