ಜಿಲ್ಲೆ

ಕುಂಪಲ ನೇಣುಬಿಗಿದ ಸ್ಥಿತಿಯಲ್ಲಿ ಯುವತಿ ಶವಪತ್ತೆ

ಮಂಗಳೂರು: ನಗರದ ಹೊರ ವಲಯದ ಕುಂಪಲದಲ್ಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ.
ಕುಂಪಲ ಆಶ್ರಯಕಾಲನಿ ನಿವಾಸಿ ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(17) ಶವವಾಗಿ ಪತ್ತೆಯಾದಾಕೆ. ಮಂಗಳೂರು ನಂತೂರು ಬಳಿಯ ನಿಟ್ಟೆ ಪಿಯುಸಿ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಇಂದು ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು. ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಗೆ ಮೂವರು ಬಂದು ಹೋಗಿದ್ದರು ಎನ್ನಲಾಗಿದೆ .ಮಧ್ಯಾಹ್ನ ವೇಳೆ ಊಟಕ್ಕೆಂದು ಮನೆಗೆ ಬಂದ ಸಂದರ್ಭ ಕೋಣೆಯೊಳಗೆ ಪ್ರೇಕ್ಷಾಲ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಕೊಲೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.