ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಸುಬ್ರಹ್ಮಣ್ಯದ ಕೆ.ಎಸ್.ಎಸ್ ಕಾಲೇಜಿನ ಕಾಲೇಜಿನ ವಾಣಿಜ್ಯ ಶಾಸ್ತ್ರ ಮತ್ತು ಉದ್ಯಮಾಡಳಿತ ವಿಭಾಗದಿಂದ ಅಂತರ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಹಬ್ಬ ಪ್ರೇರಣಾ ನಡೆಯಿತು. 10 ಸ್ಪರ್ಧೆಗಳನ್ನು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿತ್ತು. ಒಟ್ಟು 22 ತಂಡಗಳು ಭಾಗವಹಿಸಿದ್ದವು. ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜು ತಂಡವು ಸಮಗ್ರ ಪ್ರಶಸ್ತಿಯೊಂದಿಗೆ ಚಾಂಪಿಯನ್ ಪುರಸ್ಕಾರ ಪಡೆದುಕೊಂಡಿತು. ಕೆ.ಎಸ್.ಗೌಡ ಪದವಿಪೂರ್ವ ಕಾಲೇಜು ದ್ವಿತೀಯ ಸ್ಥಾನ ಗಳಿಸಿತು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ದಿನೇಶ್ ಪಿ.ಟಿ.ವಹಿಸಿದ್ದರು. ನಿತಿನ್ ಪೂಜಾರಿ ಉದ್ಘಾಟಿಸಿದರು. ಉಪನ್ಯಾಸಕಿಯರಾದ ಲತಾ ಬಿ.ಟಿ, ಕೃತಿಕಾ ಪಿ.ಎಸ್, ವಿದ್ಯಾರ್ಥಿ ಸಂಯೋಜಕ ಕೌಶಿಕ್ ಕೆ.ವಿ ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ಡಾ.ವಿನ್ಯಾಸ್ ಹೊಸೋಳಿಕೆ ಸ್ವಾಗತಿಸಿದರು. ವಿದ್ಯಾರ್ಥಿ ನಾಯಕ ಹೃತಿಕ್ ಸಿ.ವಿ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಉದ್ಯಮಿ ಕೇಶವ ಅಮೈ ಭಾಗವಹಿಸಿದ್ದರು. ನೃತ್ಯ ಕಲಾವಿದ ಕೌಶಿಕ್ ಸುವರ್ಣ ಅವರಿಂದ ಡ್ಯಾನ್ಸ್ ಧಮಾಕ ನಡೆಯಿತು. ಕೊಳಲು ಮತ್ತು ಚೆಂಡೆ ವಾದನ ನೆರವೇರಿತು. ಕಾರ್ಯಕ್ರಮವನ್ನು ಅಂತಿಮ ವಾಣಿಜ್ಯ ಪದವಿ ಮತ್ತು ಉದ್ಯಮ ಆಡಳಿತ ಪದವಿ ವಿದ್ಯಾರ್ಥಿಗಳು ಆಯೋಜಿಸಿದ್ದರು.