ಬೆಟ್ಟದಪುರ: ಕುಡಿತ ಬಿಟ್ಟು ಸುಖಕರ ಜೀವನ ನಡೆಸಲು ಇರುವ ಸರಳ ಮಾರ್ಗಗಳನ್ನು ಅನುಸರಿಸಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ಹೇಳಿದರು.
ಬೆಟ್ಟದಪುರದಲ್ಲಿ ಶ್ರೀಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಇತ್ತೀಚೆಗೆ ಹಮ್ಮಿಕೊಂಡಿದ್ದ 1658ನೇ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಹೆಸರಿನಂತೆ ಗ್ರಾಮಗಳ ಅಭಿವೃದ್ಧಿಗೆ ಸಾಕಷ್ಟು ಒತ್ತು ನೀಡಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ.
ಅದರಂತೆ ಕುಡಿತ ಚಟ ಬಿಡಿಸುವಂತಹ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಒಳ್ಳೆಯ ಸೇವೆ ನೀಡುತ್ತಿದೆ ಎಂದರು.
ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರಂಗಸ್ವಾಮಿ ಮಾತನಾಡಿ, ಎಲ್ಲರೂ ಅಚ್ಚುಕಟ್ಟಾಗಿ ಶಿಬಿರವನ್ನು ಯಶಸ್ವಿಗೊಳಿಸಿದಿರಿ. ನಿಮ್ಮ ಜೀವನವನ್ನು ಉತ್ತಮಗೊಳಿಸಿಕೊಂಡು ಸಮಾಜದಲ್ಲಿ ಒಳ್ಳೆಯ ಹೆಸರು ತರಬೇಕಿದೆ ಎಂದರು.
ಕೊಡಗು ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಬಿ.ಜೆ ದೇವರಾಜು, ಸದಸ್ಯ ಪಟೇಲ್ ನಟೇಶ್, ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್, ಶಿಬಿರಾಧಿಕಾರಿ ವಿದ್ಯಾಧರ, ಆರೋಗ್ಯ ಸಹಾಯಕಿ ಸೌಮ್ಯಾ, ಬೆಟ್ಟದಪುರ ಯೋಜನಾಧಿಕಾರಿ ಸಂತೋಷ್‌ಕುಮಾರ್, ವಲಯ ಮೇಲ್ವಿಚಾರಕರಾದ ಶ್ರೀಮತಿ, ಸುರೇಶ್, ಜಗನ್ನಾಥ್, ರಂಜಿತ್, ದಾಮೋದರ್, ಮಮಿತಾ, ನವಜೀವನ ಸಮಿತಿ ಸದಸ್ಯರು ಸೇರಿದಂತೆ ವಲಯದ ಸೇವಾ ಪ್ರತಿನಿಧಿಗಳು ಇದ್ದರು.