ಜಿಲ್ಲೆ

ಕುಡಿಯುವ ನೀರಿನ ಟ್ಯಾಂಕ್‌ಗಾಗಿ ಪ್ರತಿಭಟನೆ

ಚಾಮರಾಜನಗರ: ತಾಲೂಕಿನ ಮಂಗಲ ಗ್ರಾಮದಲ್ಲಿ ಕುಡಿಯುವ ಟ್ಯಾಂಕ್ ನಿರ್ಮಾಣ ಮಾಡಿಕೊಡುವಂತೆ ಒತ್ತಾಯಿಸಿ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿದರು. ಮಂಗಳ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ೋಷಣೆಯನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥ ರವಿಕುಮಾರ್ ಮಾತನಾಡಿ, ಕಳೆದ 2022-23 ನೇ ಸಾಲಿನಲ್ಲಿ ಮಂಗಲ ಗ್ರಾಮಸ್ಥರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲು ಮಂಜೂರಾಗಿದೆ. ಗ್ರಾ.ಪಂ ಸಾಮಾನ್ಯ ಸಭೆಯಲ್ಲೂ ಅನುಮೋದನೆಯಾಗಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಭೂಮಿಪೂಜೆಯನ್ನು ನೆರವೇರಿಸಲಾಗಿರುತ್ತದೆ. ಆದರೇ ಕುಎಇಯುವ ಟ್ಯಾಂಕ್ ನಿರ್ಮಾಣ ಮಾಡಲು ಮುಂದಾದಾಗ ಗ್ರಾಮದ ಕೆಲವರು ತೊಂದರೆ ನೀಡುತ್ತಿದ್ದಾರೆ ಎಂದು ದೂರಿದರು.

ಗ್ರಾಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪರಿಶಿಷ್ಟ ಜನಾಂಗದವರು ಹೆಚ್ಚಾಗಿ ವಾಸಮಾಡುತ್ತಿದ್ದು, ಆಗಾಗ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಆದರೇ ಟ್ಯಾಂಕ್ ನಿರ್ಮಾಣ ಮಾಡಲು ನಿರ್ಧಾರ ಮಾಡಿದ್ದ ಸರ್ಕಾರಿ ಜಾಗವನ್ನು ಕೆಲವರು ಅಕ್ರಮವಾಗಿ ಖಾತೆ ಮಾಡಿಕೊಂಡಿದ್ದು, ಟ್ಯಾಂಕ್ ನಿರ್ಮಾಣ ಮಾಡಲು ನಿರಂತರ ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಸಂಬಂಧ ಮೇಲಾಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡಲು ಅವಕಾಶ ಮಾಡಿಕೊಡಬೇಕು. ಗ್ರಾಮಸ್ಥರಿಗೆ ಕುಡಿಯುವ ನೀರಿನ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಮಾ, ಮಾಜಿ ಸದಸ್ಯ ರವಿ, ಛಲವಾಧಿ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ಮಹೇಶ್, ತಾಲೂಕು ಅಧ್ಯಕ್ಷ ಬಸವರಾಜು, ರವಿಮೌರ್ಯ, ವಾಸು ಹೊಂಡರಬಾಳು, ಕೃಷ್ಣಮೂರ್ತಿ, ನಾಗರಾಜು, ಸಿದ್ದರಾಜು, ದಿವ್ಯಜ್ಯೋತಿ, ಪಾರ್ವತಮ್ಮ, ಲಕ್ಷ್ಮೀ, ಭಾಗ್ಯ, ಶಿವಮ್ಮ, ನಾಗಮ್ಮ, ಮಲ್ಲಿಕಾರ್ಜುನ, ಗೌರಮ್ಮ, ಮಹದೇವಮ್ಮ ಹಾಗೂ ಇನ್ನಿತರರು ಭಾಗವಹಿಸಿದ್ದರು.