ಸಿಂದಗಿ ತಾಲೂಕು ಸಾಸಾಬಾಳದ ಸಿದ್ದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ವಸತಿ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಶಾಸಕ ಅಶೋಕ ಮನಗೂಳಿ ಅವರಿಗೆ ಮನವಿ ಸಲ್ಲಿಸಿದರು. ಮುಖಂಡ ರವಿರಾಜ ದೇವರಮನಿ, ಕುತುಬುದ್ದೀನ್ ಕೊರಬು, ಮುತ್ತಣ್ಣ ಮಾಕೊಂಡ ಇತರರಿದ್ದರು. 
ಜಿಲ್ಲೆ

ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ

ಬ್ರಹ್ಮದೇವನಮಡು: ಸಿಂದಗಿ ತಾಲೂಕು ಸಾಸಾಬಾಳದ ಸಿದ್ದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಗ್ರಾಮಸ್ಥರು, ಎಸ್‌ಡಿಎಂಸಿ ಪದಾಧಿಕಾರಿಗಳು ಇತ್ತೀಚೆಗೆ ಶಾಸಕ ಅಶೋಕ ಮನಗೂಳಿ ಅವರಿಗೆ ಮನವಿ ಸಲ್ಲಿಸಿದರು.

ಶಾಲೆಯಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಕಳೆದ ಹತ್ತಾರು ವರ್ಷಗಳಿಂದ ಕುಡಿಯುವ ನೀರಿಗಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಸಲು ನೀರಿನ ಸಮಸ್ಯೆಯಾಗಿದ್ದು, ಕೂಡಲೇ ಶಾಸಕರು ತಮ್ಮ ಅನುದಾನದಲ್ಲಿ ಶಾಲಾ ಆವರಣದಲ್ಲಿ ಕೊಳವೆಬಾವಿ ಕೊರೆಯಿಸಿ ಕೊಡಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಕುತುಬುದ್ದೀನ್ ಕೊರಬು, ಮುಖ್ಯಗುರು ಮುತ್ತಣ್ಣ ಮಾಕೊಂಡ ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಯುವ ಮುಖಂಡ ರವಿರಾಜ ದೇವರಮನಿ, ಶ್ರೀಶೈಲ ಜಾಲವಾದಿ, ಗೌಡಣ್ಣ ಭಜಂತ್ರಿ, ಎಂ.ಪಿ. ರಾಠೋಡ, ಕುಮಾರ ಗೊಂದಳಿ, ಭೀಮರಾಯ ಹರಿಜನ ಇತರರು ಮನವಿ ಸಲ್ಲಿಸುವ ಸಮಯದಲ್ಲಿದ್ದರು.