ಜಿಲ್ಲೆ

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಆಧ್ಯತೆ ನೀಡಿ

ಬಾಗಲಕೋಟೆ: ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದೇ ಇರುವ ಅಧಿಕಾರಿಗಳ ವಿರುದ್ದ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಗುರುವಾರದಂದು ಜರುಗಿದ ಕುಡಿಯುವ ನೀರು ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪಟ್ಟಣ ಅಥವಾ ಗ್ರಾಮೀಣ ಪ್ರದೇಶವಾಗಿರಲಿ ಯಾವುದೇ ಭಾಗದಿಂದಲೂ ಕುಡಿಯುವ ನೀರಿನ ಸಮಸ್ಯೆಯಾಗಿದೆ ಎಂಬ ದೂರವಾಣಿ ಕರೆಗಳು ಬಂದಲ್ಲಿ, ಮುಂದಿನ 12 ಗಂಟೆಗಳ ಅವಧಿಯೊಳಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಪರ್ಯಾಯ ವ್ಯವಸ್ಥೆ ಮಾಡಬೇಕು. ಇದಕ್ಕೆ ಆಯಾ ತಾಲೂಕಿನ ತಹಶೀಲ್ದಾರರು ಹೊಣೆಗಾರರಾಗಿದ್ದು, ಉಪವಿಭಾಗಾಧಿಕಾರಿಗಳ ಸಹಕಾರದೊಂದಿಗೆ ಸನ್ನಿವೇಶವನ್ನು ಸಮರ್ಪಕವಾಗಿ ನಿರ್ವಹಿಸಿರಿ. ಮುದೋಳ ತಾಲೂಕಿಗೆ ಘಟಪ್ರಭಾ ನಧಿ ನೀರು ಬರದೇ ಇರುವುದಕ್ಕೆ ಕಾರಣ ತಿಳಿದು, ಬೆಳಗಾವಿ ಪ್ರಾದೇಶಿಕ ಠಾಯುಕ್ತರಿಗೆ ಪತ್ರ ಬರೆಯಿರಿ ಎಂದರು.

ಮುಂದಿನ ಮೂರು ತಿಂಗಳು ಬರ ಪರಿಸ್ಥಿತಿ ಗಂಬೀರವಾvಗಲಿz ಎಂದು ಅಂದಾಜಿಸಲಾಗಿರುವದರಿAದ, ಜುಲೈ ಮಾಹೆಯವರೆಗೆ ಕುಡಿಯುವ ನೀರಿನ ನಿರ್ವಹಣೆಯನ್ನು ಹೇಗೆ ನಿಬಾಯಿಸುತ್ತಿರಿ ಎಂಬುದರ ಕುರಿತು ಕ್ರೀಯಾ ಯೋಜನೆ ಒಂದನ್ನು ಸೋಮವಾರದೊಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸಿ. ಸಿ ಇ ಒ ಹಾಗೂ ಜಿಲ್ಲಾಧಿಕಾರಿ ಭೂ ವಿಜ್ಞಾನಿಗಳೊಂದಿಗೆ ಸಮಾಲೋಚಿಸಿ, ಸಮಸ್ಯಾತ್ಮಕ ಪ್ರದೇಶಗಳಿಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ತಿಳಿಸಿದರು.

ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿ ಗತಿಯನ್ನು ಪರಿಶೀಲಿಸಿ ಆ ಕುರಿತು ಕೂಡ ವರದಿ ಸಲ್ಲಿಸಿ, ಹಾಸ್ಟೇಲ್, ಅಂಗನವಾಡಿ ಮತ್ತು ಶಾಲೆಗಳ ಆವರಣದಲ್ಲಿರುವ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಆಧ್ಯತೆಯ ಮೇರೆಗೆ ಪರಿಶೀಲನೆ ಮಾಡಿ, ನೀರಿನ ಟ್ಯಾಂಕ್ ಸ್ವಚ್ಚವಾಗಿರುವ ಬಗ್ಗೆ ಗಮನ ಹರಿಸಬೇಕು. ಬೇಸಿಗೆಯಾಗಿರುವದರಿಂದ ವಾಂತಿ, ಭೇದಿ ಉಲ್ಬಣಿಸುವ ಸಂಭವವಿರುತ್ತದೆ. ಇದಕ್ಕೆ ಸಂಬAಧ ಪಟ್ಟ ಅಧಿಕಾರಿಗಳು ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಬೇಜವಾಬ್ದಾರಿ ತೋರುವಂತಿಲ್ಲ ಎಂದು ಹೇಳಿದರು.

ಸಭೆಯಲ್ಲಿ ಬಿ ಟಿ ಡಿ ಎ ಅಧ್ಯಕ್ಷ ಹೆಚ್.ವಾಯ್ ಮೇಟಿ, ಹಟ್ಟಿ ಚಿನ್ನದ ಗಣಿ ನಿಯಮಿತ ಅಧ್ಯಕ್ಷ ಜೆ.ಟಿ ಪಾಟೀಲ ಹಾಗೂ ಶಾಸಕ ಬಿ.ಬಿ ಚಿಮ್ಮನಕಟ್ಟಿ, ಜಿಲ್ಲಾಧಿಕಾರಿ ಜಾನಕಿ ಕೆ.ಎಮ್. ಸಿ ಇ ಒ ಶಶಿಧರ ಕುರೇರ್ ಉಪವಿಭಾಗಾಧಿಕಾರಿಗಳಾದ ಅಶೋಕ ಜಗಲಾಸರ, ಸಂತೋಷ ಕಾಮಗೌಡ ಸೇರಿದಂತೆ ಆಯಾ ತಾಲೂಕಿನ ತಹಶೀಲ್ದಾರರು ಮತ್ತು ಇ ಒ ಉಪಸ್ಥಿತರಿದ್ದರು.