ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಂಚಾಯತ ರಾಜ್ ಅಭಿವೃದ್ಧಿ ಅಽಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ ಇದ್ದರು. 
ಜಿಲ್ಲೆ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಿ

ಬಾಗಲಕೋಟೆ: ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಸಕಾಲಿಕವಾಗಿ ಕುಡಿಯುವ ನೀರಿನ ಪೂರೈಕೆಗೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಂಚಾಯತ ರಾಜ್ ಅಭಿವೃದ್ಧಿ ಅಽಕಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೇಸಿಗೆ ಕಾಲವಿರುವದರಿಂದ ಕುಡಿಯುವ ನೀರಿನ ಸಮಸ್ಯೆ ಕಂಡುಬAದಲ್ಲಿ ಕೊರತೆಯನ್ನು ನೀಗಿಸಲು ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಅಽಕಾರಿಗಳು ತೆರಳಿ ಮುಂಜಾಗ್ರತವಾಗಿ ಪರಿಶೀಲನೆ ನಡೆಸಿ ತುರ್ತಾಗಿ ಕ್ರಮ ವಹಿಸಬೇಕು ಎಂದರು.

ಮಹಾತ್ಮಾಗಾAಽ ಉದ್ಯೋಗ ಖಾತ್ರಿ ಂಯೋಜನೆಯಡಿ ಪರಿಣಾಮಕಾರಿಯಾಗಿ ಅನುಷ್ಠಾನ ಚರ್ಚಿಸಿದ ಸಿಇಒ ಅವರು ಹೆಚ್ಚಿನ ಮಾನವ ದಿನಗಳ ಸೃಜನೆ ಹಾಗೂ ಕಾರ್ಮಿಕರಿಗೆ ಕೂಲಿ, ಸಕಾಲದಲ್ಲಿ ವೇತನ ಪಾವತಿಗೆ ಕ್ರಮವಹಿಸಬೇಕು. ಇದಲ್ಲದೆ ಪಂಚಾಯಿತಿ ರಾಜ್ ಸಂಸ್ಥೆಗಳು ಮತ್ತು ಅವುಗಳ ಕಾರ್ಯನಿರ್ವಹಣೆಯ ಸ್ಥಿತಿಯನ್ನು ನಿರ್ಣಯಿಸಲಾಯಿತು. ಸ್ಥಳೀಯ ಆಡಳಿತವನ್ನು ಬಲಪಡಿಸಲು ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ಸಮುದಾಯದ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಲಾಯಿತು.

ವಸತಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಿಇಒ ಅವರು ಬಾಕಿ ಇರುವ ಅರ್ಜಿಗಳನ್ನು ತ್ವರಿತಗೊಳಿಸಲು ಮತ್ತು ಅರ್ಹ ಫಲಾನುಭವಿಗಳಿಗೆ ವಸತಿ ಘಟಕಗಳ ಗುಣಮಟ್ಟ ಮತ್ತು ಸಕಾಲಿಕ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಪಿಡಿಒಗಳಿಗೆ ಸೂಚನೆ ನೀಡಿದರು. ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಣಾಮಕಾರಿಯಾಗಿ ಪರಿಹರಿಸಲು ಮತ್ತು ತಳಮಟ್ಟದಲ್ಲಿ ಸೇವೆಗಳನ್ನು ಒದಗಿಸಲು ಎಲ್ಲ ಅಽಕಾರಿಗಳು ಪೂರ್ವಭಾವಿಯಾಗಿ ಕೆಲಸ ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಾ ಕಾರ್ಯನಿರ್ವಾಹಕ ಅಽಕಾರಿಗಳು, ಸಹಾಯಕ ನಿರ್ದೇಶಕರು, ಎಲ್ಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಽಕಾರಿಗಳು ಉಪಸ್ಥಿತರಿದ್ದರು.