???????????????????????????????????? 
ಜಿಲ್ಲೆ

ಕುರಿಗಾರರ ಪ್ರತಿಭಟನೆ 23ರಂದು

ಬೀದರ್: ಸಾವಿಗೀಡಾದ ಕುರಿಗಳಿಗೆ ಪರಿಹಾರಕ್ಕೆ ಒತ್ತಾಯಿಸಿ ನ.23 ರಂದು ನಗರದಲ್ಲಿ ಕುರಿಗಾರರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕುರಿ ಮತ್ತು ಮೇಕೆ ಮಹಾಮಂಡಳ ಅಧ್ಯಕ್ಷ ಪಂಡಿತರಾವ ಚಿದ್ರಿ ತಿಳಿಸಿದ್ದಾರೆ. ಅಂದು ಬೆಳಗ್ಗೆ 11ಕ್ಕೆ ನಗರದ ಸಾಯಿ ಶಾಲೆ ಆವರಣದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಯಲಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪ್ರತಿನಿಧಿಗಳು ಹಾಗೂ ಕುರಿಗಾರರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯಲ್ಲಿ ಸಾವಿಗೀಡಾದ 1200 ಕುರಿಗಳಿಗೆ ಪರಿಹಾರ ಕಲ್ಪಿಸಬೇಕು. ಕುರಿಗಳ ಆರೋಗ್ಯ ರಕ್ಷಣೆಗೆ ಔಷಧ ಪೂರೈಸಬೇಕು. ಎಕ್ಸ್ ಗ್ರೇ ಷಿಯಾ ಯೋಜನೆ ಮುಂದುವರಿಸಬೇಕು. ಅರಣ್ಯ ಕುರಿಗಾರರ ಸಮಸ್ಯೆ ಪರಿಹರಿಸಬೇಕು ಎಂಬಿತ್ಯಾದಿ ಬೇಡಿಕೆ ಮಂಡಿಸಿ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.