ಅಂಬೇಡ್ಕರ್ ಅಧ್ಯಯನ ಸಂಸ್ಥೆ ಮುಖ್ಯಸ್ಥ ಹಾಗೂ ಮಾಜಿ ಸಚಿವ ಬಿ.ಬಿ.ನಿಂಗಯ್ಯ 
ಜಿಲ್ಲೆ

ಕುವೆಂಪು ಜನ್ಮದಿನಾಚರಣೆ ಡಿ.೨೯ಕ್ಕೆ

ಚಿಕ್ಕಮಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆ, ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಬೌದ್ಧ ಮಹಾಸಭಾ ಸಹಯೋಗದಲ್ಲಿ ಡಿ. ೨೯ರಂದು ಮಧ್ಯಾಹ್ನ ೨.೩೦ಕ್ಕೆ ತೇಗೂರಿನ ಗಿರಿಧಾಮ ಬುದ್ಧ ವಿಹಾರದಲ್ಲಿ ರಾಷ್ಟö್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅಂಬೇಡ್ಕರ್ ಅಧ್ಯಯನ ಸಂಸ್ಥೆ ಮುಖ್ಯಸ್ಥ ಹಾಗೂ ಮಾಜಿ ಸಚಿವ ಬಿ.ಬಿ.ನಿಂಗಯ್ಯ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬುದ್ಧ ವಿಹಾರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಸೇರಿದಂತೆ ಮಹಾನ್ ದರ್ಶನಿಕರ ಜಯಂತಿ ನಡೆಸುವ ಮೂಲಕ ಈ ಸ್ಥಳವನ್ನು ಜ್ಞಾನ ಪ್ರಸಾರ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕುವೆಂಪು ಜನ್ಮದಿನಾಚರಣೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಖ್ಯಾತ ಅಂಕಣಕಾರ ಹಾಗೂ ಸಾಹಿತಿ ಬಿ.ಚಂದ್ರೇಗೌಡ ಅವರು ಕುವೆಂಪು ಕುರಿತು ಪ್ರಧಾನ ಭಾಷಣ ಮಾಡಲಿದ್ದಾರೆ. ಪ್ರಸಿದ್ಧ ವೈದ್ಯ ಡಾ. ಜೆ.ಪಿ.ಕೃಷ್ಣೇಗೌಡ ಅವರು ಕುವೆಂಪು ಭಾವಚಿತ್ರ ಅನಾವರಣಗೊಳಿಸಲಿದ್ದಾರೆ. ಶಾಸಕರಾದ ಎಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಪ್ರಮುಖರಾದ ಡಾ. ಅಂಶುಮAತ್, ಎ.ಎನ್.ಮಹೇಶ್, ಎಂ.ಸಿ.ಶಿವಾನAದ ಸ್ವಾಮಿ, ಸೂರಿ ಶ್ರೀನಿವಾಸ್, ರವೀಶ್ ಬಸಪ್ಪ, ಎಚ್.ಎಚ್.ದೇವರಾಜ್, ಎಚ್.ಎಸ್.ಮಂಜಪ್ಪ, ಗುರುಶಾಂತಪ್ಪ, ಎಚ್.ಎಂ.ರುದ್ರಸ್ವಾಮಿ, ಅನಿಲ್ ಕುಮಾರ್, ಪರಮೇಶ್ವರ್ ಉಪಸ್ಥಿತರಿರಲಿದ್ದಾರೆ. ಬಿ.ಬಿ.ನಿಂಗಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಸಾಹಿತ್ಯ ಲೋಕದಲ್ಲಿ ಸದಾ ಬೆಳಗುವ ದೃವ ತಾರೆಯಾಗಿರುವ ಕುವೆಂಪು ಅವರು ತಮ್ಮ ಸಾಹಿತ್ಯದ ಮೂಲಕ ಸಮಾಜದ ಅನಿಷ್ಟಗಳ ವಿರುದ್ಧ ಪ್ರತಿಭಟನೆಯ ರೂಪದಲ್ಲಿ ಪರಿಣಾಮಕಾರಿ ಸಂದೇಶ ನೀಡಿದ್ದಾರೆ. ಮನುಜ ಮತ ವಿಶ್ವಪಥ ಎಂಬ ತತ್ವ ವಾಕ್ಯದ ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ದಾರಿಯಲ್ಲಿ ಸಾಗುವುದು ಇಡೀ ಜಗತ್ತಿಗೆ ಪ್ರಸ್ತುತವಾಗಿದೆ. ಸರ್ವ ಜನಾಂಗದ ಶಾಂತಿಯ ತೋಟದ ಘೋಷವಾಕ್ಯದೊಂದಿಗೆ ಸಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಅಂಬೇಡ್ಕರ್ ಅಧ್ಯಯನ ಸಂಸ್ಥೆಯ ಪ್ರಮುಖರಾದ ಹರಿಯಪ್ಪ, ಕೃಷ್ಣಯ್ಯ, ದಲಿತ ಸಂಘಟನೆಗಳ ಮುಖಂಡರಾದ ಮರ್ಲೆ ಅಣ್ಣಯ್ಯ, ಹುಣಸೆಮಕ್ಕಿ ಲಕ್ಷö್ಮಣ್, ದಂಟರಮಕ್ಕಿ ಶ್ರೀನಿವಾಸ್, ಗ್ರೀನ್ ಬ್ರಿಗೇಡ್ ಅಧ್ಯಕ್ಷ ಹರೀಶ್ ಮಿತ್ರ ಉಪಸ್ಥಿತರಿದ್ದರು.