ವಿಜಯವಾಣಿ ಸುದ್ದಿಜಾಲ ಧಾರವಾಡ
ಕನ್ನಡ ಸಾಹಿತ್ಯದಲ್ಲಿ ಕುವೆಂಪು ಅಗ್ರಗಣ್ಯರು. ಅವರ ವ್ಯಕ್ತಿತ್ವ ಮತ್ತು ಜೀವನ ಸಾಧನೆಗಳು ಬದುಕಿಗೆ ಮಾರ್ಗಸೂಚಿಗಳಾಗಿವೆ. ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎಂಬ ನೀತಿ ಪಾಠ ಅಳವಡಿಸಿಕೊಳ್ಳುವ ಮೂಲಕ ರಾಷ್ಟçಕವಿ ಕುವೆಂಪು ಕಂಡ ಸಾಮರಸ್ಯದ ಬದುಕು ಹೊಂದಬೇಕು ಎಂದು ಅಪರ ಜಿಲ್ಲಾಽಕಾರಿ ಶಿವಾನಂದ ಭಜಂತ್ರಿ ಹೇಳಿದರು.
ನಗರದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಕುವೆಂಪು ಜನ್ಮದಿನದ ಅಂಗವಾಗಿ ಗುರುವಾರ ಆಯೋಜಿಸಿದ್ದ ವಿಶ್ವಮಾನವ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲರೂ ವಿಶ್ವಮಾನತೆ, ಉದಾರತೆ ಮತ್ತು ಸಾಮರಸ್ಯ ಅಳವಡಿಸಿಕೊಂಡಾಗ ನಿಜರೂಪದಲ್ಲಿ ವಿಶ್ವಮಾನವರಾಗುತ್ತಾರೆ. ಯುವ ಸಮುದಾಯವು ಕುವೆಂಪು ಸಾಹಿತ್ಯ, ಜೀವನಚರಿತ್ರೆ, ಸಂದೇಶಗಳನ್ನು ಓದುವ ಮೂಲಕ ಸಹೋದರತ್ವ ಭಾವನೆ ಬೆಳೆಸಿಕೊಳ್ಳಬೇಕು ಎಂದರು.
ಹಿರಿಯ ಸಾಹಿತಿ ಡಾ. ಹೇಮಾ ಪಟ್ಟಣಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಇತರರಿದ್ದರು.
ವಿವಿಧ ತಾಲೂಕುಗಳ ಕವಿಗಳು ಕವನ ವಾಚಿಸಿದರು. ಕಲಾವಿದೆ ವಿಶ್ವೇಶ್ವರಿ ಹಿರೇಮಠ ಮತ್ತು ತಂಡ ಕುವೆಂಪು ಗೀತೆಗಳನ್ನು ಪ್ರಸ್ತುತ ಪಡಿಸಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.