ಧಾರವಾಡ: ಹಿಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರ ತೆರೆಯಲಾಗಿದೆ. ರೈತರು ಮೇ ೨೯ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ಪ್ರತಿ ಕ್ವಿಂಟಾಲ್‌ಗೆ ೫,೬೫೦ ರೂ. ದರ ನಿಗದಿಪಡಿಸಲಾಗಿದೆ. ಕುಂದಗೋಳ, ಯರಗುಪ್ಪಿ, ಕಮಡೊಳ್ಳಿ, ಸಂಶಿ, ಯರಗುಪ್ಪಿ, ಇಂಗಳಗಿ, ಹಿರೇಹರಕುಣಿ, ಶಿರಗುಪ್ಪಿ, ಶಿರೂರು ಕೇಂದ್ರಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಅಧ್ಯಕ್ಷ ಹಾಗೂ ಜಿಲ್ಲಾಽಕಾರಿ ಗುರುದತ್ತ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.