ಬಾಗಲಕೋಟೆ: ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕೂಡಲ ಸಂಗಮದಲ್ಲಿ ಎರಡು ದಿನಗಳ ಕಾಲ ಅನುಭವ ಮಂಟಪ-ಬಸವಾದಿ ಶರಣರ ವೈಭವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು, ಈ ಹಿನ್ನಲೆಯಲ್ಲಿ ಬಸಣ್ಣನವರ ತತ್ವ, ಸಂದೇಶಗಳನ್ನು ಪ್ರಚೂರಪಡಿಸುವ ನಿಟ್ಟಿನಲ್ಲಿ ಕೂಡಲಸಂಗಮದಲ್ಲಿ ಎರಡು ದಿನಗಳ ಕಾಲ ಸಾಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಾಂಸ್ಕೃತಿಕ ವೈಭವದಲ್ಲಿ ಮೊದಲ ದಿನ ಏ.೨೯ ರಂದು ಬೆಳಗ್ಗೆ ೧೦ ಗಂಟೆಯಿAದ ಸಂಜೆ ೫.೩೦ ವರೆಗೆ ವಚನ ಸಾಹಿತ್ಯ ಸಮಕಾಲಿನ ಸಂವೇದನೆ ಕುರಿತು ವಿಚಾರಗೋಷ್ಠಿ ನಡೆಯಲಿವೆ. ಗೋಷ್ಠಿ-೧ರಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ-ವರ್ತಮಾನದ ಜರೂರು ವಿಷಯ ಕುರಿತು ರಂಜಾನ್ ದುರ್ಗಾ, ಡಾ.ತಾರಿಣಿ ಶುಭದಾಯಿನಿ, ಡಾ.ವಿಕ್ರಂ ವಸಾಜಿ ವಿಷಯ ಮಂಡನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಹಿಸುವರು. ಗೋಷ್ಠಿ-೨ರಲ್ಲಿ ವಚನ ಸಾಹಿತ್ಯ ಮತ್ತು ಭಾರತದ ಸಂವಿಧಾನ ಕುರಿತು ಡಾ.ಕೆ.ನೀಲಾ, ಪ್ರೊ.ಎಂ.ಎಸ್.ಶೇಖರ್ ಮಂಡನೆ ಮಾಡಲಿದ್ದಾರೆ.
ಗೋಷ್ಠಿ-೩ರಲ್ಲಿ ವಚನ ಸಾಹಿತ್ಯ ಮತ್ತು ಮಹಿಳೆ ಕುರಿತು ಡಾ.ಬಸವರಾಜ ಸಾದರ್, ಡಾ.ಸಚಿತಾ ಬನ್ನಾಡಿ, ಡಾ.ಪ್ರಜ್ಞಾ ಮತ್ತಿಹಳ್ಳಿ ವಿಷಯ ಮಂಡನೆ ಮಾಡಿದರೆ, ಗೋಷ್ಠಿ-೪ರಲ್ಲಿ ವಿಶ್ವ ಶಾಂತಿ ಹಾಗೂ ಸಾಮರಸ್ಯ ಕುರಿತು ಡಾ.ಮೀನಾಕ್ಷಿ ಬಾಳಿ, ಡಾ.ಡೊಮಿನಿಕ್, ಡಾ.ಮೈಸೂರು ಉಮೇಶ್ ಮಂಡನೆ ಮಾಡಲಿದ್ದಾರೆ. ಡಾ.ಸವಿತಾ ನಾಗಭೂಷಣ, ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ವೈಭವದ ಎರಡನೇ ದಿನ ಏ.೩೦ ರಂದು ಬೆಳಗ್ಗೆ ೧೧ ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ಹಾಗೂ ಬಸವ ರಾಷ್ಟಿçÃಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಲಿದ್ದಾರೆ. ವಿಶ್ವಗುರು ಬಸವಣ್ಣ ಸಾಂಸ್ಕೃತಿ ನಾಯಕ ಪುಸ್ತಕವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶವಕುಮಾರ ಬಿಡುಗಡೆ ಮಾಡಲಿದ್ದಾರೆ. ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅಧ್ಯಕ್ಷತೆ ವಹಿಸಲಿದ್ದಾರೆ. ಸಭಾಪತಿ ಯು.ಟಿ.ಖಾದರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಜ ತಂಗಡಗಿ, ಆರ್.ಬಿ.ತಿಮ್ಮಾಪೂರ ಸೇರಿದಂತೆ ಇತರೆ ಸಚಿವ ಸಂಪುಟದ ಸಚಿವರು, ಶಾಸಕರು ವಿ.ಪ ಸದಸ್ಯರು ಸಾಹಿತಿಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಏ.೩೦ ರಂದು ಬೆಳಗ್ಗೆ ಕೂಡಲಸಂಗಮೇಶ್ವರ ದೇವಸ್ಥಾನದಿಂದ ಸಭಾಮಂಟಪವರೆಗೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಹಾಗೂ ಏ.೨೯ ಮತ್ತು ೩೦ ರಂದು ಸಂಜೆ ೯ ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮಗಳು ಸಹ ಜರುಗಲಿವೆ. ಈ ಎರಡು ದಿನಗಳ ಕಾಲ ಜರಗುವ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ನಾಡಿನ ಹಾಗೂ ಜಿಲ್ಲೆಯ ಜನತೆ ಸಾಕಷ್ಟು ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ಸಂದರ್ಭದಲ್ಲಿ ರನ್ನ ವೈಭವದ ಕಾರ್ಯಕ್ರಮದ ಲೆಕ್ಕಪತ್ರದ ವಿವರವನ್ನು ತಿಳಿಸಿದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಪೀರಪ್ಪ ಮ್ಯಾಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.