ಜಿಲ್ಲೆ

ಕೂಡುಮಂಗಳೂರು ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ

ಕುಶಾಲನಗರ: 2022-23 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯು ಆಯ್ಕೆಯಾಗಿದೆ.


ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯು 2021-22ರ ಸಾಲಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಷ್ಕರಣೆ, ಸಂಪನ್ಮೂಲ ಕ್ರೋಡೀಕರಣ, ಹಸಿ-ಒಣ ಕಸ ವಿಂಗಡಣೆ-ನಿರ್ವಹಣೆ, ಕೋವಿಡ್ ನಿರ್ವಹಣೆ, ತಂತ್ರಜ್ಞಾನ ಬಳಕೆ, ನೈರ್ಮಲ್ಯ ಯೋಜನೆ, ಕಸ ವಿಲೇವಾರಿ, ಕುಡಿಯುವ ನೀರಿನ ವ್ಯವಸ್ಥೆ, ಶಾಲೆ-ಅಂಗನವಾಡಿ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ತಡೆಗೋಡೆ, ತೆರಿಗೆ ವಸೂಲಾತಿ, ನೂತನ ತಂತ್ರಜ್ಞಾನದ ಗ್ರಂಥಾಲಯಗಳ ನಿರ್ಮಾಣ ಸೇರಿದಂತೆ ಗ್ರಾಮದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಧಾರದ ಮೇಲೆ 2023ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಮುಡಿಗೇರಿಸಿಕೊಂಡಿದೆ.


ಈ ಗ್ರಾಪಂ 2018ರಲ್ಲಿಯೂ ಪ್ರಶಸ್ತಿಯನ್ನು ಪಡೆದಿತ್ತು. ಈ ಬಾರಿಯೂ ಪ್ರಶಸ್ತಿ ಪಡೆಯುವ ಮೂಲಕ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ ಎಂದು ಕೂಡುಮಂಗಳೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಂತೋಷ ತಿಳಿಸಿದ್ದಾರೆ.