ಚಾಮರಾಜನಗರ: ಮೇ 1ರ ಕಾರ್ಮಿಕ ದಿನಾಚರಣೆ ಅಂಗವಾಗಿ ಚಾಮರಾಜನಗರ ದಿನಸಿ ಹಾಗೂ ಜವಳಿ ಅಂಗಡಿ ಕೂಲಿ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕೆಂದು ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಚೆನ್ನಶೆಟ್ಟಿ ಕಾರ್ಮಿಕ ಅಧಿಕಾರಿಗಳಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿದರು. ವರ್ಷಪೂರ್ತಿ ದುಡಿಯುವ ಕಾರ್ಮಿಕರಿಗೆ ಅನುಕೂಲವಾಗುವಂತೆ ಕಡ್ಡಾಯವಾಗಿ ರಜೆ ನೀಡಲು ಅಂಗಡಿ ಮಾಲೀಕರಿಗೆ ಸೂಚನೆ ನೀಡಬೇಕೆಂದು ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.