ಕೃಷಿ ಇಲಾಖೆಯ ಗ್ರೂಪ್ ಸಿ ವೃಂದದಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೆಪಿಎಸ್ಸಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ.
ಜೆಡಿಎಸ್ನ ಎಚ್.ಡಿ.ರೇವಣ್ಣ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಖಾಲಿ ಇರುವ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
2018-19ನೇ ಸಾಲಿನಲ್ಲಿ ಗ್ರೂಪ್-ಎ ಮತ್ತು ಬಿ ವೃಂದದಲ್ಲಿ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗಿದೆ. ಮುಂಬಡ್ತಿ ಕೋಟಾದಲ್ಲಿ ಖಾಲಿ ಇರುವ ಹುದ್ದೆಗಳನ್ನು ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ ಎಂದಿದ್ದಾರೆ.