ಕಲಬುರಗಿ: ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿAದ ನಗರದ ಎಪಿಎಂಸಿ ಆವರಣದಲ್ಲಿ ಜು.೨೭, ೨೮, ೨೯ರಂದು ಹಮ್ಮಿಕೊಂಡಿರುವ `ಕೃಷಿ ಜಾತ್ರೆ ರೈತರ ನಡೆ ಸಾವಯವ ಕೃಷಿ ಕಡೆ' ಕಾರ್ಯಕ್ರಮದ ಪೂರ್ವಭಾವಿಯಾಗಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಲಾಯಿತು.
ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ, ಪಶುಸಂಗೋಪನಾ ಇಲಾಖೆ, ಮೀನುಗಾರಿಕೆ ಇಲಾಖೆ ಮತ್ತು ರೇಷ್ಮೆ ಇಲಾಖೆಗಳ ಅಧಿಕಾರಿಗಳು, ಎಚ್‌ಕೆಸಿಸಿಐ ಪದಾಧಿಕಾರಿಗಳ ಜಂಟಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಾತ್ರೆಯ ಯಶಸ್ಸಿಗೆ ಅಗತ್ಯವಾದ ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸೂಚಿಸಿದರು.
ಕೃಷಿ ಜಾತ್ರೆಯ ಭಿತ್ತಿಪತ್ರ ಮತ್ತು ಹಸ್ತಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ಕೆಕೆಸಿಸಿಐ ಅಧ್ಯಕ್ಷ ಶಶಿಕಾಂತ ಪಾಟೀಲ್, ಕಾರ್ಯದರ್ಶಿ ಮಂಜುನಾಥ ಜೇವರ್ಗಿ, ಶರಣು ಪಪ್ಪಾ, ಸಮದ್ ಪಟೇಲ್, ರಾಜು ತೆಗ್ಗೆಳ್ಳಿ, ಶಿವಕುಮಾರ ಇಂಗೀನಶೆಟ್ಟಿ ಇತರರಿದ್ದರು.